ಚುನಾವಣೋತ್ತರ ಸಮೀಕ್ಷಾ ಫಲಿತಾಂಶ ತಿರಸ್ಕರಿಸಿದ ಸತೀಶ್ ಜಾರಕಿಹೊಳಿ

ಉಪಚುನಾವಣೆ ಕರಿತ ಚುನಾವಣೋತ್ತರ ಸಮೀಕ್ಷಾ ಫಲಿತಾಂಶಕ್ಕೆ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿಯವರು ತೀವ್ರ ಕಿಡಿಕಾರಿದ್ದಾರೆ. 
ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ

ಬೆಳಗಾವಿ: ಉಪಚುನಾವಣೆ ಕರಿತ ಚುನಾವಣೋತ್ತರ ಸಮೀಕ್ಷಾ ಫಲಿತಾಂಶಕ್ಕೆ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿಯವರು ತೀವ್ರ ಕಿಡಿಕಾರಿದ್ದಾರೆ. 

ಚುನಾವಣೋತ್ತರ ಸಮೀಕ್ಷಾ ಫಲಿತಾಂಶ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದ್ದು, ಸಮೀಕ್ಷಾ ವರದಿ ಬಿಜೆಪಿ ಪರವಾಗಿದೆ. 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವರದಿಗಳು ತಿಳಿಸಿದ್ದವು. 

ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸತೀಶ್ ಜಾರಕಿಹೊಳಿಯವರು, ಈ ಫಲಿತಾಂಶ ಕುರಿತು ಕಾಂಗ್ರೆಸ್ ಪಕ್ಷದವರು ಆತಂಕ ಪಡುವ ಅಗತ್ಯವಿಲ್ಲ. ಗೋಕಾಕ್ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ. ಕಾಂಗ್ರೆಸ್ ನಡೆಸಿರುವ ಸಮೀಕ್ಷೆ ಪ್ರಕಾರ ಯಾವುದೇ ಕಾರಣಕ್ಕೂ ಪಕ್ಷ ಸೋಲುವುದಿಲ್ಲ ಎಂದು ಹೇಳಲಾಗಿದೆ ಎಂದು ತಿಳಿಸಿದ್ದಾರೆ. 

ಇದೇ ವೇಳೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನಡೆದಿದ್ದ ಚುನಾವಣೋತ್ತರ ಸಮೀಕ್ಷಾ ವರದಿಯನ್ನು ಇದೇ ವೇಳೆ ಉಲ್ಲೇಖಿಸಿರುವ ಅವರು, ಪ್ರತೀ ಬಾರಿ ಸಮೀಕ್ಷಾ ವರದಿ ನಿಖರವಾಗಿರುವುದಿಲ್ಲ. ಮತಎಣಿಕೆ ದಿನ ಎಲ್ಲಾ ಸತ್ಯ ಬಹಿರಂಗಗೊಳ್ಳಲಿದೆ ಎಂದು ತಿಳಿಸಿದ್ದಾರೆ. 

ಇದೇ ವೇಳೆ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಪ್ರಚಾರ ನಡೆಸಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮಹಾರಾಷ್ಟ್ರ ಚುನಾವಣೆಯಲ್ಲಿ ಪಕ್ಷ 44 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಅಲ್ಲಿಯೂ ಯಾವುದೇ ನಾಯಕರೂ ಪ್ರಚಾರ ನಡೆಸಿರಲಿಲ್ಲ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com