ಸಚಿವ ಸಂಪುಟ ವಿಸ್ತರಣೆ ಕುರಿತು ವರಿಷ್ಠರು ಹೇಳಿದಂತೆ ತೀರ್ಮಾನ:ಸಿಎಂ ಬಿ ಎಸ್ ಯಡಿಯೂರಪ್ಪ 

ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ಬಗ್ಗೆ ಬಿಜೆಪಿ ವರಿಷ್ಠರ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಸಾಗರದಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಬರಮಾಡಿಕೊಂಡ ಬಿಜೆಪಿ ಮುಖಂಡರು
ಸಾಗರದಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಬರಮಾಡಿಕೊಂಡ ಬಿಜೆಪಿ ಮುಖಂಡರು

ಸಾಗರ(ಶಿವಮೊಗ್ಗ): ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ಬಗ್ಗೆ ಬಿಜೆಪಿ ವರಿಷ್ಠರ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.


ಅವರು ನಿನ್ನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪುತ್ರಿಯ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.


ಅನರ್ಹ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೊ, ಬೇಡವೊ ಎಂಬ ಬಗ್ಗೆ ಕೂಡ ವರಿಷ್ಠರು ತೀರ್ಮಾನಿಸಲಿದ್ದಾರೆ. ಅವರ ಮಾರ್ಗದರ್ಶನದಂತೆ ಮುನ್ನಡೆಯುತ್ತೇನೆ ಎಂದರು. 


ಉಪ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆದ್ದು ಮುಂದಿನ ಮೂರೂವರೆ ವರ್ಷಗಳ ಕಾಲ ಸ್ಥಿರ ಸರ್ಕಾರ ನೀಡಲಿದೆ. ಮುಂಬರುವ ಬಜೆಟ್ ನಲ್ಲಿ ಎಲ್ಲಾ ವರ್ಗಗಳ ಹಿತ ಕಾಯುವ ಮೂಲಕ ವಿಶೇಷ ಕಾರ್ಯಕ್ರಮಗಳನ್ನು ಘೋಷಿಸಲಾಗುವುದು. ವಿರೋಧ ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com