ನಾನು ಸೋತಿದ್ದೇನೆ: ಸಿಎಲ್‌ಪಿ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೆ

15 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಪ್ರದರ್ಶನ ನೀಡಿದ್ದು ಕೇವಲ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರಿಂದ ಸೋಲಿನ ಹೊಣೆ ಹೊತ್ತು ಕರ್ನಾಟಕ ಶಾಸಕಾಂಗ ಪಕ್ಷದ ಸ್ಥಾನಕ್ಕೆ ರಾಜಿನಾಮೆ ನೀಡಿರುವುದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: 15 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಪ್ರದರ್ಶನ ನೀಡಿದ್ದು ಕೇವಲ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರಿಂದ ಸೋಲಿನ ಹೊಣೆ ಹೊತ್ತು ಕರ್ನಾಟಕ ಶಾಸಕಾಂಗ ಪಕ್ಷದ ಸ್ಥಾನಕ್ಕೆ ರಾಜಿನಾಮೆ ನೀಡಿರುವುದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ ಅವರು, ರಾಜ್ಯದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಂದುಕೊಂಡಷ್ಟು ಫಲಿತಾಂಶ ನೀಡುವುದರಲ್ಲಿ ಸೋತಿದೆ. ಹೀಗಾಗಿ ರಾಜ್ಯದಲ್ಲಿ ಪಕ್ಷದ ಹಿತದೃಷ್ಠಿಯಿಂದ ನಾನು ಸಿಎಲ್‌ಪಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದೇನೆ ಎಂದು ಹೇಳಿದರು.

ಸಿಎಲ್‌ಪಿ ನಾಯಕನಾಗಿ ನಾನು ಕೆಲವೊಂದು ಮೌಲ್ಯಗಳನ್ನು ಎತ್ತಿ ಹಿಡಿಯಬೇಕು. ನಾನು ಸಾಕಷ್ಟು ಪ್ರಯತ್ನ ಪಟ್ಟು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಿದ್ದೇನೆ ಅದು ಸಾಧ್ಯವಾಗಿಲ್ಲ. ಹೀಗಾಗಿ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ ಎಂದರು. 

ಇನ್ನು ರಾಜಿನಾಮೆ ಪತ್ರವನ್ನು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕರ್ನಾಟಕ ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರಿಗೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com