ಉಪ ಚುನಾವಣೆ ಫಲಿತಾಂಶ: ಜನಾದೇಶವನ್ನು ಒಪ್ಪಿಕೊಳ್ಳುತ್ತೇವೆ- ಡಿಕೆ ಶಿವಕುಮಾರ್ 

15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ ಪ್ರಗತಿಯಲ್ಲಿದ್ದು, ಈಗಾಗಲೇ ಎರಡು ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ 12 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ ಪ್ರಗತಿಯಲ್ಲಿದ್ದು, ಈಗಾಗಲೇ ಎರಡು ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ 12 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 

ಬೆಂಗಳೂರು ಗ್ರಾಮಾಂತರ ಕ್ಷೇತ್ರ ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಮುನ್ನಡೆಯಲ್ಲಿದ್ದು, ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಹಿನ್ನಡೆ ಅನುಭವಿಸಿದ್ದಾರೆ.

ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್  ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್,  15 ಕ್ಷೇತ್ರಗಳ ಮತದಾರರು ನೀಡುವ ಜನಾದೇಶಕ್ಕೆ ತಲೆಬಾಗುವುದಾಗಿ ತಿಳಿಸಿದ್ದರು.

ಜನರು ಪಕ್ಷಾಂತರಿಗಳನ್ನು  ಒಪ್ಪಿಕೊಂಡಿದ್ದಾರೆ. ನಾವು ಸೋಲನ್ನು ಒಪ್ಪಿಕೊಂಡಿದ್ದೇವೆ, ಆದರೆ, ನಿರಾಸರಾಗುವುದಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com