ಉಪಚುನಾವಣೆ ಫಲಿತಾಂಶ: ಸಕ್ಕರೆ ನಾಡು ಮಂಡ್ಯದಲ್ಲಿ ಇತಿಹಾಸ ಬರೆದ ಬಿಜೆಪಿ

ರಾಜ್ಯದ ಬೇರೆ ಯಾವುದೇ ಜಿಲ್ಲೆಯಲ್ಲಿ ಬೇಕಾದರೂ ಬಿಜೆಪಿ ಕಮಲ ಅರಳಬಹುದು. ಆದರೆ, ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಮಾತ್ರ ಅದು ಸಾಧ್ಯವೇ ಇಲ್ಲ ಎಂಬ ರಾಜ್ಯ ರಾಜಕಾರಣದಲ್ಲಿ ದಶಕಗಳಲ್ಲಿ ಚಾಲ್ತಿಯಲ್ಲಿದ್ದ ಮಾತನ್ನು ಪ್ರಸಕ್ತ ಉಪಚುನಾವಣೆ ಹುಸಿಗೊಳಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದ ಬೇರೆ ಯಾವುದೇ ಜಿಲ್ಲೆಯಲ್ಲಿ ಬೇಕಾದರೂ ಬಿಜೆಪಿ ಕಮಲ ಅರಳಬಹುದು. ಆದರೆ, ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಮಾತ್ರ ಅದು ಸಾಧ್ಯವೇ ಇಲ್ಲ ಎಂಬ ರಾಜ್ಯ ರಾಜಕಾರಣದಲ್ಲಿ ದಶಕಗಳಲ್ಲಿ ಚಾಲ್ತಿಯಲ್ಲಿದ್ದ ಮಾತನ್ನು ಪ್ರಸಕ್ತ ಉಪಚುನಾವಣೆ ಹುಸಿಗೊಳಿಸಿದೆ. 

ಕೆ.ಆರ್.ಪೇಟೆ ವಿಧಾನಸಬಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಅವರು ಗೆಲುವು ಸಾಧಿಸಿದ್ದು, ಈ ಮೂಲಕ ಬಿಜೆಪಿ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮಂಡ್ಯ ಜಿಲ್ಲೆಯಲ್ಲಿ ಖಾತೆ ತೆರೆದಿದೆ. ಮಂಡ್ಯ ಜಿಲ್ಲೆಯಲ್ಲಿ ಗೆಲುವು ಸಾಧಿಸಿರುವುದು ಇದೀಗ ರಾಜಕೀಯ ವಲಯದಲ್ಲಿ ಇತರ ಪಕ್ಷಗಳ ನಾಯಕರ ಹುಬ್ಬೇರುವಂತೆ ಮಾಡಿದೆ. 

ಈ ಗೆಲುವಿನ ಹಿಂದೆ ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಅವರ ರಂತಂತ್ರ, ಶ್ರಮ ದೊಡ್ಡದು ಎಂದು ಹೇಳಲಾಗುತ್ತಿದೆ. 

ವಿಜಯೇಂದ್ರ ಅವರ ನೇತೃತ್ವದಲ್ಲಿ ಪಕ್ಷದ ಉಸ್ತುವಾರಿಗಳ ತಂಡ ರಚಿಸಲಾಗಿತ್ತು. ಉಸ್ತುವಾರಿಯಾಗಿ ನೇಮಕಗೊಂಡ ನಂತರ ಸತತವಾಗಿ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡು ಪಕ್ಷದ ಸಂಘಟನೆ ವಿಸ್ತರಿಸಿದ್ದರು. ಹೀಗಾಗಿ ಈ ಗೆಲವು ವಿಜಯೇಂದ್ರ ಅವರ ರಾಜಕೀಯ ಭವಿಷ್ಯಕ್ಕೆ ದೊಡ್ಡ ಮೆಟ್ಟಿಲಾಗುವ ಸಾಧ್ಯತೆಯಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿ ಅಥವಾ ಸ್ಥಾನಮಾನವನ್ನು ತಂದುಕೊಡುವ ನಿರೀಕ್ಷೆಗಳೂ ಹುಟ್ಟಿಸಿದೆ. 

ಕೆ.ಆರ್.ಪೇಟೆ ತಾಲೂಕಿನ ಬುಕನಕೆರೆ ಯಡಿಯೂರಪ್ಪ ಅವರ ಸ್ವಂತ ಊರು. ಆದರೆ, ಅವರು ರಾಜಕೀಯ ಜೀವನ ಆರಂಭಿಸಿದ್ದು ಶಿವಮೊಗ್ಗ ಜಿಲ್ಲೆಯಲ್ಲಿ ಹಿಂದೆ ಹಲವು ಬಾರಿ ತವರು ಜಿಲ್ಲೆ ಮಂಡ್ಯದಲ್ಲಿ ಪಕ್ಷಕ್ಕೆ ಗೆಲುವು ತಂದುಕೊಡಲು ಯಡಿಯೂರಪ್ಪ ಅವರು ಕನಸು ಕಂಡು ಪ್ರಯತ್ನ ಮಾಡಿದರೂ ಅದು ಯಶಸ್ವಿಯಾಗಿರಲಿಲ್ಲ. ಇದೀಗ ವಿಜಯೇಂದ್ರ ಅವರು ಯಡಿಯೂರಪ್ಪ ಅವರ ಕನಸನ್ನು ನನಸಾಗಿಸಿದ್ದಾರೆ.

ಅಷ್ಟೇ ಏಕೆ, ಈಗ ಕಂದಾಯ ಸಚಿವರಾಗಿರುವ ಅಶೋಕ್ ಗೆ ಹಲವು ಬಾರಿ ಜಿಲ್ಲೆಯ ಪಕ್ಷದ ಸಂಘಟನೆಯ ಜವಾಬ್ದಾರಿ ನೀಡಿದರೂ ಸಾಧ್ಯವಿಲ್ಲ ಎಂದು ಕೈಚೆಲ್ಲಿ ವಾಪಸ್ಸಾಗಿದ್ದರು. ಆದರೆ, ವಿಜಯೇಂದ್ರ ಅವರು ಪಟ್ಟು ಹಿಡಿಗು ಪಕ್ಷಕ್ಕೆ ಗೆಲುವು ತಂದುಕೊಟ್ಟಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com