ಕಾಂಗ್ರೆಸ್ ನಲ್ಲಿ ಮುಂದುವರೆದ ರಾಜೀನಾಮೆ ಪರ್ವ: ಉಸ್ತುವಾರಿ ಸ್ಥಾನಕ್ಕೆ ಕೆಸಿ ವೇಣುಗೋಪಾಲ್ ರಾಜೀನಾಮೆ?

15 ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯ ಕಾಂಗ್ರೆಸ್ ನಲ್ಲಿ ರಾಜೀನಾಮೆ ಪರ್ವ ಆರಂಭವಾಗಿದ್ದು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಳಿಕ ಇದೀಗ...
ಕೆಸಿ ವೇಣುಗೋಪಾಲ್
ಕೆಸಿ ವೇಣುಗೋಪಾಲ್

ಬೆಂಗಳೂರು: 15 ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯ ಕಾಂಗ್ರೆಸ್ ನಲ್ಲಿ ರಾಜೀನಾಮೆ ಪರ್ವ ಆರಂಭವಾಗಿದ್ದು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಳಿಕ ಇದೀಗ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸ್ಥಾನಕ್ಕೆ ಕೆಸಿ ವೇಣುಗೋಪಾಲ್ ಅವರು ಸಹ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.

ಉಪ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ಕೆ.ಸಿ.ವೇಣುಗೋಪಾಲ್ ಅವರು ಈಗಾಗಲೇ ತಮ್ಮ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ರವಾನಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಅಲ್ಲದೆ ಡಿಸೆಂಬರ್ 14ರ ನಂತರ ರಾಜ್ಯ ಕಾಂಗ್ರೆಸ್ ಗೆ ನೂತನ ಉಸ್ತುವಾರಿಯನ್ನು ನೇಮಿಸುವ ಸಾಧ್ಯತ ಇದೆ.

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರ ಸ್ಥಾನಕ್ಕೆ ದಿನೇಶ್‌ ಗುಂಡೂರಾವ್‌ ಅವರು ರಾಜೀನಾಮೆ ನೀಡಿದ್ದರು. ಈಗ ಈ ಸಾಲಿಗೆ ಕೆ.ಸಿ.ವೇಣುಗೋಪಾಲ್ ಸೇರಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com