ಬೆಂಗಳೂರು: ಪೌರತ್ವ ಮಸೂದೆ ತಿದ್ದುಪಡಿ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ರಾಜ್ಯ ಕಾಂಗ್ರೆಸ್ ಮುಖಂಡರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ರಾಜ್ಯ ಕಾಂಗ್ರೆಸ್ ಮುಖಂಡರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಬಿಜೆಪಿ ನಾಯಕರು ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಧಿಕ್ಕಾರ ಕೂಗಿದರು.

ಪೌರತ್ವ ಕಾಯ್ದೆಗೆ ತಿದ್ದುಪಡಿ ತರುವುದು ಬೇಡ. ತಿದ್ದುಪಡಿ ಮಸೂದೆಗೆ ನಮ್ಮ ವಿರೋಧವಿದೆ. ದೇಶದಲ್ಲಿ ಎಲ್ಲರಿಗೂ ಬದುಕುವ ಹಕ್ಕಿದ್ದು, ಆ ಹಕ್ಕನ್ನು ಕಸಿದುಕೊಳ್ಳಬಾರದು. ಬಿಜೆಪಿ ಮುಸಲ್ಮಾನರನ್ನು ಗುರಿಯಾಗಿಸಿಕೊಂಡು ಪೌರತ್ವ ಮಸೂದೆಗೆ ತಿದ್ದಪಡಿ ತಂದಿರುವುದು ಸಂವಿಧಾನ ವಿರೋಧಿ ಕ್ರಮ. ಕೂಡಲೇ ಈ ಕಾಯ್ದೆನ್ನು ವಾಪಸ್ ಪಡೆಯುವಂತೆ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು.

ಈಶ್ವರ್ ಖಂಡ್ರೆ ಮಾತನಾಡಿ, ಪೌರತ್ವ ಕಾಯ್ದೆಗೆ ತಿದ್ದುಪಡಿ ತರುವುದು ಸರಿಯಲ್ಲ. ಅಕ್ರಮ ವಲಸಿಗರ ಹೆಸರಿನಲ್ಲಿ ವಂಚನೆ ನಡೆಯುತ್ತಿದ್ದು, ತಿದ್ದುಪಡಿ ಹೆಸರಿನಲ್ಲಿ ಮುಸ್ಲೀಂ ಸಮುದಾಯವನ್ನು ದೇಶದಿಂದ ಹೊರಹಾಕುವ ಪ್ರಯತ್ನ ಮಾಡುತ್ತಿದೆ‌. ಕೇಂದ್ರದ ಈ ನಡೆ ಸಂವಿಧಾನದ ಮೇಲಿನ ಅಕ್ರಮಣದಂತಿದೆ ಎಂದು ಕಿಡಿಕಾರಿದರು.

ಕೇಂದ್ರ ಸರ್ಕಾರ ಕಾಯಿದೆ ಹೆಸರಿನಲ್ಲಿ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂವಿಧಾನಕ್ಕೆ ಧಕ್ಕೆ ತರುತ್ತಿದ್ದಾರೆ. ಇದನ್ನು ಜಾತ್ಯಾತೀತ ಪಕ್ಷಗಳು ಒಪ್ಪುವುದಿಲ್ಲ. ಕಾಂಗ್ರೆಸ್ ಇದನ್ನು ಬಲವಾಗಿ ವಿರೋಧಿಸುತ್ತದೆ ಎಂದರು.

ಸದ್ಯಕ್ಕೆ ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಮೊದಲು ಅದು ಅಂಗೀಕಾರವಾಗಬೇಕು. ಬಳಿಕ ಮುಂದೆ ಯಾರು ಎನ್ನುವ ಪ್ರಶ್ನೆ ಉದ್ಭವಿಸುತ್ತದೆ. ತಮಗೆ ಹೈಕಮಾಂಡ್ ಯಾವುದೇ ಹುದ್ದೆ ಕೊಟ್ಟರೂ ನಿಭಾಯಿಸಲು ತಾವು ಸಿದ್ಧ ಎಂದರು.

ಗುರುವಾರ ಭಾರತ ಬಚಾವೋ ಪ್ರತಿಭಟನೆಗೆ ಎಲ್ಲ ನಾಯಕರು ದೆಹಲಿಗೆ ಹೋಗುತ್ತಿದ್ದೇವೆ. ಈ ಸಂದರ್ಭದಲ್ಲಿ ಹೈಕಮಾಂಡ್ ಭೇಟಿ ಮಾಡುವುದಾಗಿ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com