ಬೆಂಗಳೂರು ಅಭಿವೃದ್ಧಿ ಖಾತೆಗೆ ಹೆಚ್ಚಾದ ಲಾಬಿ: ಡಿಸಿಎಂ ಡಾ. ಅಶ್ವಥ್ ನಾರಾಯಣಗೆ ದೊರೆಯುವ ಸಾಧ್ಯತೆ?

ಪ್ರಭಾವಿ ಬೆಂಗಳೂರು ಅಭಿವೃದ್ಧಿ ಖಾತೆ ಪಡೆಯಲು ಉಪ ಚುನಾವಣೆಯಲ್ಲಿ ಗೆದ್ದಂತಹ ಶಾಸಕರು ಹೆಚ್ಚಾದ ಲಾಬಿ ಮಾಡುತ್ತಿರುವಂತೆಯೇ ಈ ಖಾತೆ ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಅವರಿಗೆ ದೊರೆಯಲಿದೆ ಎಂಬಂತಹ ಮಾತುಗಳು ಪಕ್ಷದ ವಲಯದಲ್ಲಿ ಕೇಳಿಬರುತ್ತಿದೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ

ಬೆಂಗಳೂರು: ಪ್ರಭಾವಿ ಬೆಂಗಳೂರು ಅಭಿವೃದ್ಧಿ ಖಾತೆ ಪಡೆಯಲು ಉಪ ಚುನಾವಣೆಯಲ್ಲಿ ಗೆದ್ದಂತಹ ಶಾಸಕರು ಹೆಚ್ಚಾದ ಲಾಬಿ ಮಾಡುತ್ತಿರುವಂತೆಯೇ ಈ ಖಾತೆ ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಅವರಿಗೆ ದೊರೆಯಲಿದೆ ಎಂಬಂತಹ ಮಾತುಗಳು ಪಕ್ಷದ ವಲಯದಲ್ಲಿ ಕೇಳಿಬರುತ್ತಿದೆ.

ಒಂದು ವೇಳೆ ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಡಾ. ಅಶ್ವಥ್ ನಾರಾಯಣ ಪಡೆದರೆ ಅವರ ಬಳಿಯಿರುವ ಐಟಿ, ಬಿಟಿ ಹಾಗೂ ವೈದ್ಯಕೀಯ ಶಿಕ್ಷಣ ಖಾತೆ ಬೇರೆಯವರ ಪಾಲಾಗಿದೆ. ನಗರಾಭಿವೃದ್ದಿ ಖಾತೆ ಪಡೆದರೂ ಐಟಿ, ಬಿಟಿ ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಳ್ಳಲು ಅವರು ಇಚ್ಚಿಸಿದ್ದಾರೆ ಎಂಬಂತಹ ಮಾಹಿತಿ ತಿಳಿದುಬಂದಿದೆ. 

ಪ್ರಸ್ತುತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬಳಿಯೇ ಇರುವ  ಬೆಂಗಳೂರು ನಗರಾಭಿವೃದ್ಧಿ ಖಾತೆ ಮೇಲೆ ಕೆಆರ್ ಪುರಂ ಶಾಸಕ ಬೈರತಿ ಬಸವರಾಜ್, ಮಹಾಲಕ್ಷ್ಮೀ ಲೇಔಟ್ ಶಾಸಕ ಗೋಪಾಲಯ್ಯ ಹಾಗೂ ಯಶವಂತಪುರ ಶಾಸಕ ಎಸ್ . ಟಿ ಸೋಮಶೇಖರ್ ಕಣ್ಣಿಟ್ಟಿದ್ದಾರೆ.

2008ರಲ್ಲಿ ಬೆಂಗಳೂರು ಅಭಿವೃದ್ದಿ ಖಾತೆಯಲ್ಲಿ ಯಡಿಯೂರಪ್ಪ ಯಾರಿಗೂ ನೀಡಿರಲಿಲ್ಲ. ಆದರೆ, ಆರ್. ಅಶೋಕ್ ಹಾಗೂ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಿದ್ದರು. ಆದರೆ, ಅವರ ಬಳಿ ಇರುವ ಹೆಚ್ಚುವರಿ ಖಾತೆಯನ್ನು ಬೇರೆಯವರಿಗೆ ನೀಡಬೇಕಾದ ಅನಿವಾರ್ಯತೆ ಎದುರಾಗಿದೆ. ಇದು ಅತ್ಯಂತ ಪ್ರಭಾವಿ ಖಾತೆಯಾಗಿದ್ದು, ಅನೇಕ ಮಂದಿ ತಮ್ಮಗೆ ಆ ಖಾತೆ ನೀಡುವಂತೆ ಒತ್ತಡ ಹಾಕುತ್ತಿದ್ದಾರೆ. ಉಪ ಚುನಾವಣೆಯಲ್ಲಿ ಗೆದ್ದಿರುವ ಮೂವರು ಶಾಸಕರು ಈ ಖಾತೆಗೆ ಬೇಡಿಕೆ ಇಟ್ಟಿರುವುದಾಗಿ ಬಿಜೆಪಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. 

 ಕಂದಾಯ ಸಚಿವ ಆರ್. ಅಶೋಕ್ ಕೂಡಾ ಈ ಖಾತೆ ಮೇಲೆ ಕಣ್ಣಿಟ್ಟಿದ್ದರು. ಆದರೆ, ಕಳೆದ ಚುನಾವಣೆಯಲ್ಲಿ ಬಿಜೆಪಿ ಪರವಾದ ಮತಗಳಿಕೆ ಅವರು ಸಹಕರಿಸಲಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಅವರಿಗೆ ಆ ಖಾತೆ ಪಡೆಯಲು ಸಾಧ್ಯವಾಗಿಲ್ಲ. ಡಾ. ಅಶ್ವಥ್ ನಾರಾಯಣ್ ಕ್ಲೀನ್ ಇಮೇಜ್ ಹೊಂದಿದ್ದು, ಪ್ರಭಾವಿ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದು, ಇವರಿಗೆ ಈ ಖಾತೆ ನೀಡಿದರೆ ಬರುವಂತಹ ಚುನಾವಣೆಗಳಲ್ಲಿ ಬಿಜೆಪಿಗೆ ವರವಾಗಲಿದೆ. 

ಆರ್. ಅಶೋಕ್ ಹೊರತುಪಡಿಸಿದರೆ ಬಿಜೆಪಿಯಲ್ಲಿ ಪ್ರಭಾವಿ ಒಕ್ಕಲಿಗ ಸಮುದಾಯದ ನಾಯಕರು ಇಲ್ಲ. ಈ ಸಮುದಾಯದ ಪರ್ಯಾಯ ನಾಯಕನನ್ನು ಸೃಷ್ಟಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಇವರಿಗೆ ನೀಡುವ ಮೂಲಕ ಮುಂದಿನ ಚುನಾವಣೆಗೆ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕನಾಗಿ ಮಾಡುವುದು ಬಿಜೆಪಿಯ ಯೋಜನೆಯಾಗಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com