ಉಪಚುನಾವಣೆ ವೈಫಲ್ಯ ವಿಶ್ಲೇಷಣೆ: ನಾಯಕತ್ವ ಬದಲಾವಣೆಗೆ ಕಾಂಗ್ರೆಸ್  ಚಿಂತನೆ

 ರಾಜ್ಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ದಿನೇಶ್ ಗುಂಡೂರಾವ್ ಕೆಪಿಸಿಸಿ ಅದ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್
ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್

ಬೆಂಗಳೂರು:  ರಾಜ್ಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ದಿನೇಶ್ ಗುಂಡೂರಾವ್ ಕೆಪಿಸಿಸಿ ಅದ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಹೊಸ ನೇಮಕಾತಿಗಳು ನಡೆಯುವ ಸಾಧ್ಯತೆಯಿಲ್ಲ,  ಕೇಂದ್ರ ನಾಯಕರು ರಾಜ್ಯಕ್ಕೆ ಆಗಮಿಸಿ ಇಲ್ಲಿನ ಸ್ಥಳೀಯ ನಾಯಕರ ಜೊತೆ ಚರ್ಚಿಸಿ  ನಂತರ ನಿರ್ಧಾರ ಕೈಗೊಳ್ಳಲಿದ್ದಾರೆ. 

ಕೆಪಿಸಿಸಿಯ ಪ್ರಮುಖ ಸ್ಥಾನಗಳಿಗೆ ಪದಾದಿಕಾರಿಗಳನ್ನು ನೇಮಿಸಲು  ಕೇಂದ್ರ ನಾಯಕರು ಈಗಾಗಲೇ ಸಮಾಲೋಚನೆ ನಡೆಸುತ್ತಿದ್ದಾರೆ.  ರಾಜ್ಯ ಕಾಂಗ್ರೆಸ್ ನಲ್ಲಿ ಬದಲಾವಣೆಯಾಗಲಿದ್ದು,  ಹಿರಿಯ ನಾಯಕರಗಳ ಜೊತೆ ಚರ್ಚಿಸಬೇಕೆಂದು ಮಾಜಿ ಸಚಿವರೊಬ್ಬರು ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಮಲ್ಲಿಕಾರ್ಜುನ ಖರ್ಗೆ, ಕೆಎಚ್ ಮುನಿಯಪ್ಪ, ಡಿಕೆ ಶಿವಕುಮಾರ್, ಮತ್ತು ಎಂಬಿ ಪಾಟೀಲ್, ಹೆಸರಗಳು ಕೇಳಿ ಬರುತ್ತಿವೆ.  ಇದರ ಜೊತೆಗೆ ಜಿ ಪರಮೇಶ್ವರ್ ಹಾಗೂ ಎಚ್ ಕೆ ಪಾಟೀಲ್ ಕೂಡ ಮುಂಚೂಣಿಯಲ್ಲಿದ್ದಾರೆ.   ಒಂದು ವೇಳೆ ಸಿದ್ದರಾಮಯ್ಯ ರಾಜಿನಾಮೆ ಅಂಗೀಕರವಾದರೇ ಎಚ್.ಕೆ ಪಾಟೀಲ್ ಅವರನ್ನು ವಿರೋಧ ಪಕ್ಷದ ನಾಯಕರಾಗಿ ನೇಮಿಸುವ ಸಾಧ್ಯತೆಯಿದೆ. 

ಕೆಪಿಸಿಸಿ ಅಧ್ಯಕ್ಷರ ರಾಜಿನಾಮೆ ಅಂಗೀಕರಿಸಿ ಹೊಸ ಅಧ್ಯಕ್ಷರನ್ನು ನೇಮಿಸಲಾಗುವುದು,  ಇನ್ನೂ ಸಿದ್ದರಾಮಯ್ಯ ಅವರು ಸಿಎಲ್ ಪಿ ನಾಯಕನಾಗಿ ಮುಂದುವರಿಸಬೇಕೆ ಅಥವಾ ಬೇಡವೇ ಎಂಬುದನ್ನು  ಹೈಕಮಾಂಡ್ ನಿರ್ಧರಿಸಲಿದೆ, ಎಂದು ಮೂಲಗಳು ತಿಳಿಸಿವೆ.

ಮಾಜಿ ಕೇಂದ್ರ ಸಚಿವ ಕೆ.ಎಚ್ ಮುನಿಯಪ್ಪ ಎರಡು ರಾಜಿನಮೆಗಳನ್ನು ಅಂಗೀಕರಿಸಿ  ಹಿರಿಯ ನಾಯಕರಿಗೆ ಹುದ್ದೆ ನೀಡುವಂತೆ ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com