ಉತ್ತರ ಕರ್ನಾಟಕ ಶಾಸಕರಿಗೆ ಸಚಿವ ಸ್ಥಾನ: ಸಿಎಂ ಯಡಿಯೂರಪ್ಪ ಮೇಲೆ ಹೆಚ್ಚಿದ ಒತ್ತಡ

ಸರ್ಕಾರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಇದೀಗ ಬೆಳಗಾವಿ ಬಿಜೆಪಿ ಶಾಸಕರಿಂದ ಉನ್ನತ ಸ್ಥಾನಕ್ಕಾಗಿ ನೀಡುವಂತೆ ಒತ್ತಡ ಹೆಚ್ಚಾಗಿದೆ ಎಂಬ ಮಾತುಗಳು ಕೇಳಿಬರತೊಡಗಿವೆ. 
ಯಡಿಯೂರಪ್ಪ
ಯಡಿಯೂರಪ್ಪ

ಬೆಳಗಾವಿ: ಸರ್ಕಾರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಇದೀಗ ಬೆಳಗಾವಿ ಬಿಜೆಪಿ ಶಾಸಕರಿಂದ ಉನ್ನತ ಸ್ಥಾನಕ್ಕಾಗಿ ನೀಡುವಂತೆ ಒತ್ತಡ ಹೆಚ್ಚಾಗಿದೆ ಎಂಬ ಮಾತುಗಳು ಕೇಳಿಬರತೊಡಗಿವೆ. 

8 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಉಮೇಶ್ ಕತ್ತಿಯವರು ಈ ಬಾರಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಪಣತೊಟ್ಟಂತಿದ್ದು, ಪದೇ ಪದೇ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡುತ್ತಿರುವುದಾಗಿ ತಿಳಿದುಬಂದಿದೆ. 

ಈಗಾಗಲೇ ಯಡಿಯೂರಪ್ಪ ಅವರು 15 ಅನರ್ಹ ಶಾಸಕರಿಗೂ ಸಚಿವ ಸ್ಥಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಇದರಲ್ಲಿ ಚುನಾವಣೆಯಲ್ಲಿ ಸೋಲು ಕಂಡವರಿಗೂ ಕೂಡ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ. ಹೀಗಾಗಿ ಉಮೇಶ್ ಕತ್ತಿಯವರಿಗೆ ಸಂಪುಟದಲ್ಲಿ ಸ್ಥಾನ ಸಿಗುವ ಕುರಿತು ಈವರೆಗೂ ಯಾವುದೇ ಸ್ಪಷ್ಟ ಮಾಹಿತಿಗಳು ತಿಳಿದುಬರುತ್ತಿಲ್ಲ. ಎರಡು ದಿನಗಳಲ್ಲಿ ಉಮೇಶ್ ಕತ್ತಿಯವರು ಯಡಿಯೂರಪ್ಪ ಅವರನ್ನು ಎರಡು ಬಾರಿ ಭೇಟಿ ಮಾಡಿದ್ದು, ನಿನ್ನೆ ಕೂಡ ಮತ್ತೆ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದರಿಂದ ಯಡಿಯೂರಪ್ಪ ಅವರ ಮೇಲೆ ಒತ್ತಡ ಹೆಚ್ಚಾದಂತಾಗಿದೆ ಎಂದು ಹೇಳಲಾಗುತ್ತಿದೆ. 

ಉಮೇಶ್ ಕತ್ತಿಯವರು ಹೆಚ್ಚಿನ ಒತ್ತಡ ಹೇರುತ್ತಿರುವುದರಿಂದ ಇದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದ್ದು, ಉಮೇಶ್ ಕತ್ತಿಯವರಿಗೆ ಸ್ಥಾನ ನೀಡಲು ಯಡಿಯೂರಪ್ಪ ಅವರು ಮೇಶ್ ಅವರನ್ನು ಕೈಬಿಡುವ ಎಲ್ಲಾ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. 

ಈಗಗಾಲೇ ಬೆಳಗಾವಿ ಕ್ಷೇತ್ರದಿಂದ ಶಶಿಕಲಾ ಜೊಳ್ಳೆ ಹಾಗೂ ಲಕ್ಷ್ಮಣ್ ಸವದಿಯವರು ಸಂಪುಟದಲ್ಲಿ ಸ್ಥಾನ ಪಡೆದುಕೊಂಡಿದ್ದು, ಜಾರಕಿಹೊಳಿ, ಕುಮಟಳ್ಳಿ, ಶ್ರೀಮಂತ ಪಾಟೀಲ್ ಹಾಗೂ ಕತ್ತಿಯವರು ಸೇರಿದರೆ ಒಟ್ಟು 6 ಮಂದಿ ಬೆಳಗಾವಿ ಶಾಸಕರು ಸಂಪುಟದಲ್ಲಿ ಸೇರ್ಪಡೆಗೊಂಡಂತಾಗುತ್ತದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com