ಅಂಗೀಕಾರಗೊಂಡಿಲ್ಲ ಸಿದ್ದು ರಾಜೀನಾಮೆ: ಸಿಎಲ್'ಪಿ ನಾಯಕರಾಗಿ ಮುಂದುವರಿಕೆ?

ಪ್ರಮುಖ ಹುದ್ದೆಗಳಿಗೆ ನಾಯಕರು ನೀಡಿದ್ದ ರಾಜೀನಾಮೆ ಪರಿಣಾಮ ನಾಯಕತ್ವ ಇಲ್ಲದೆ ಕಂಗಾಲಾಗಿದ್ದ ಕಾಂಗ್ರೆಸ್ ಪಕ್ಷಕ್ಕೆ ಇದೀಗ ತುಸು ನೆಮ್ಮದಿ ಸಿಕ್ಕಂತಾಗಿದೆ. ಉಪಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆಸಿದ್ದರಾಮಯ್ಯ ಅವರು ನೀಡಿದ್ದ ರಾಜೀನಾಮೆಯನ್ನು...
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಪ್ರಮುಖ ಹುದ್ದೆಗಳಿಗೆ ನಾಯಕರು ನೀಡಿದ್ದ ರಾಜೀನಾಮೆ ಪರಿಣಾಮ ನಾಯಕತ್ವ ಇಲ್ಲದೆ ಕಂಗಾಲಾಗಿದ್ದ ಕಾಂಗ್ರೆಸ್ ಪಕ್ಷಕ್ಕೆ ಇದೀಗ ತುಸು ನೆಮ್ಮದಿ ಸಿಕ್ಕಂತಾಗಿದೆ. ಉಪಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆಸಿದ್ದರಾಮಯ್ಯ ಅವರು ನೀಡಿದ್ದ ರಾಜೀನಾಮೆಯನ್ನು ಕಾಂಗ್ರೆಸ್ ಇನ್ನೂ ಅಂಗೀಕರಿಸಿಲ್ಲ. ಹೀಗಾಗಿ ಶಾಸಕಾಂಗ ಪಕ್ಷದ ನಾಯಕರಾಗಿ ಮುಂದುವರೆಯಲಿದ್ದಾರೆಂದು ಹೇಳಲಾಗುತ್ತಿದೆ. 

ಸಿದ್ದರಾಮಯ್ಯ ಅವರಿಗೆ ಹೃದಯ ಸಮಸ್ಯೆ ಎದುರಾಗಿದ್ದು, ಮಲ್ಲೇಶ್ವರಂನಲ್ಲಿರುವ ಆಸ್ಪತ್ರೆಯಲ್ಲಿ ಆ್ಯಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಪ್ರಸ್ತುತ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಸಿದ್ದರಾಮಯ್ಯ ಅವರಿಗೆ ಶನಿವಾರ ರಾತ್ರಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರುಕರೆ ಮಾಡಿ ಮಾತನಾಡಿದ್ದು, ಆರೋಗ್ಯ ವಿಚಾರಿಸಿದ್ದಾರೆ.

ಮಾತುಕತೆ ವೇಳೆ ರಾಹುಲ್ ಅವರು, ನೀವು ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆಯಬೇಕು. ಈ ಬಗ್ಗೆ ದೆಹಲಿಗೆ ಬಂದಾಗ ಮಾತನಾಡುತ್ತೇನೆ. ಆರೋಗ್ಯ ಸಂಪೂರ್ಣ ಸುಧಾರಿಸಿದ ಬಳಿಕ ದೆಹಲಿಗೆ ಬರುವಂತೆ ತಿಳಿಸಿದ್ದಾರೆಂದು ವರದಿಗಳು ತಿಳಿಸಿವೆ. 

ರಾಹುಲ್ ಗಾಂಧಿಯವರೇ ಸಿದ್ದರಾಮಯ್ಯ ಅವರ ಬಳಿ ಮಾತುಕತೆ ನಡೆಸಿರುವ ಹಿನ್ನೆಲೆಯಲ್ಲಿ ಸಿದ್ದು ಸಲ್ಲಿಸಿದ್ದ ರಾಜೀನಾಮೆಯನ್ನು ಕಾಂಗ್ರೆಸ್ ಇನ್ನೂ ಅಂಗೀಕರಿಸಿಲ್ಲ. ಹೀಗಾಗಿ ಸಿದ್ದರಾಮಯ್ಯ ಅವರೇ ಶಾಸಕಾಂಗ ಪಕ್ಷದ ನಾಯಕರಾಗಿ ಮುಂದುವರೆಯಲಿದ್ದಾರೆಂದು ಹೇಳಲಾಗುತ್ತಿದೆ. 

ಪ್ರಸ್ತುತ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸ್ಥಾನಕ್ಕಷ್ಟೇ ರಾಜೀನಾಮೆ ನೀಡಿದ್ದು, ವಿರೋಧ ಪಕ್ಷದ ನಾಯಕ ಸ್ಥಾನದ ಕುರಿತು ಕೆಲ ಗೊಂದಲಗಳು ಮೂಡಿವೆ. ಶಾಸಕಾಂಗ ಪಕ್ಷದ ನಾಯಕರಾಗಿರುವವರಿಗೆ ಸಾಮಾನ್ಯವಾಗಿ ವಿರೋಧ ಪಕ್ಷದ ನಾಯಕ ಸ್ಥಾನವನ್ನೂ ನೀಡಲಾಗುತ್ತದೆ. ಇದು ಕಾಂಗ್ರೆಸ್ ಪಕ್ಷದಲ್ಲಿ ನಡೆದುಕೊಂಡು ಬಂದಿರುವ ಸಂಪ್ರದಾಯ ಎಂದು ಸಿದ್ದರಾಮಯ್ಯ ಆಪ್ತರು ಹೇಳಿದ್ದಾರೆ. 

ಇನ್ನು ಸಿದ್ದರಾಮಯ್ಯ ಅವರೊಂದಿಗೆ ದಿನೇಶ್ ಗುಂಡೂರಾವ್ ಕೂಡ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ದಿನೇಶ್ ಅವರೂ ಕೂಡ ತಮ್ಮ ಹುದ್ದೆಯಲ್ಲಿ ಮುಂದುವರೆಯುತ್ತಾರೆಯೇ ಅಥವಾ ಇಲ್ಲವೇ ಎಂಬುದೂ ಕೂಡ ಇನ್ನು ಸ್ಫಷ್ಟಗೊಂಡಿಲ್ಲ. ವರದಿಗಳ ಪ್ರಕಾರ ಮುಂದಿನ ಕೆಪಿಸಿಸಿ ಅಧ್ಯಕ್ಷ ಸ್ಥಾನ ಡಿ.ಕೆ.ಶಿವಕುಮಾರ್ ಅವರಿಗೆ ಒಲಿದು ಬರಲಿದೆ ಎನ್ನಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com