ಪೌರತ್ವ ಕಿಚ್ಚು: ಸಾರ್ವಜನಿಕ ಆಸ್ತಿ ನಾಶಪಡಿಸಿದರೆ ಕಂಡಲ್ಲಿ ಗುಂಡಿಕ್ಕಿ, ಕೇಂದ್ರ ಸಚಿವ ಸುರೇಶ್ ಅಂಗಡಿ

ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದು ಈ ಸಂದರ್ಭದಲ್ಲಿ ಸಾರ್ವಜನಿಕ ಆಸ್ತಿಗಳನ್ನು ನಾಪಡಿಸಿದರೆ ಕಂಡಲ್ಲಿ ಗುಂಡಿಕ್ಕಿ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ವಿವಾದಿತ ಹೇಳಿಕೆ ನೀಡಿದ್ದಾರೆ.
ಸುರೇಶ್ ಅಂಗಡಿ
ಸುರೇಶ್ ಅಂಗಡಿ

ಹುಬ್ಬಳ್ಳಿ: ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದು ಈ ಸಂದರ್ಭದಲ್ಲಿ ಸಾರ್ವಜನಿಕ ಆಸ್ತಿಗಳನ್ನು ನಾಪಡಿಸಿದರೆ ಕಂಡಲ್ಲಿ ಗುಂಡಿಕ್ಕಿ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ವಿವಾದಿತ ಹೇಳಿಕೆ ನೀಡಿದ್ದಾರೆ. 

ಕಾಂಗ್ರೆಸ್ ನ ಕುತಂತ್ರದಿಂದಾಗಿ ಈ ಹೋರಾಟಗಳು ನಡೆಯುತ್ತಿವೆ ಎಂದರು. ಇನ್ನು ಪೌರತ್ವ ಕಾಯ್ದೆಯಿಂದ ಯಾವುದೇ ಭಾರತೀಯನಿಗೆ ತೊಂದರೆಯಿಲ್ಲ. ನೆರೆ ರಾಷ್ಟ್ರಗಳಲ್ಲಿರುವ ಧಾರ್ಮಿಕ ಅಲ್ಪ ಸಂಖ್ಯಾತರಿಗೆ ಅನುಕೂಲ ಕಲ್ಪಿಸಲು ಕಾಯ್ದೆ ತರಲಾಗಿದೆ. ಇದನ್ನು ವಿರೋಧಿಸುತ್ತಿರುವವರ ವಿರುದ್ಧ ಆಯಾ ರಾಜ್ಯಗಳ ಗೃಹ ಸಚಿವರು ಕಠಿಣ ಕ್ರಮಕ್ಕೆ ಮುಂದಾಗಬೇಕು ಎಂದರು. 

ಸಾರ್ವಜನಿಕ ಆಸ್ತಿ ನಾಶಪಡಿಸುವುದರಿಂದ ಜನರ ತೆರಿಗೆ ಹಣ ನಷ್ಟವಾಗುತ್ತದೆ. ಒಂದು ರೈಲು ಅಭಿವೃದ್ಧಿಪಡಿಸಲು ವರ್ಷಗಳೇ ಬೇಕಾಗುತ್ತದೆ. ಸಾರ್ವಜನಿಕ ಆಸ್ತಿಗೆ ಯಾರಾದರೂ ಕಲ್ಲು ತೂರಾಟ ನಡೆಸಿದ್ದಲ್ಲಿ ಸರ್ದಾರ್ ವಲ್ಲಭಾಯ್ ಪಟೇಲ್ ರೀತಿಯಲ್ಲಿ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com