ದೇಶದಲ್ಲಿ ಕಾಂಗ್ರೆಸ್​ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ: ನಳಿನ್​ ಕುಮಾರ್​ ಕಟೀಲ್​​

ಪೌರತ್ವ ಕಾಯ್ದೆ ವಿರುದ್ಧ ಕೇವಲ ಕಾಂಗ್ರೆಸಿಗರು ಮಾತ್ರ ಹೋರಾಟ ಮಾಡುತ್ತಿದ್ದಾರೆ. ಕಾಂಗ್ರೆಸ್ಸಿಗರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್

ಶಿವಮೊಗ್ಗ: ಪೌರತ್ವ ಕಾಯ್ದೆ ವಿರುದ್ಧ ಕೇವಲ ಕಾಂಗ್ರೆಸಿಗರು ಮಾತ್ರ ಹೋರಾಟ ಮಾಡುತ್ತಿದ್ದಾರೆ. ಕಾಂಗ್ರೆಸ್ಸಿಗರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಪೌರತ್ವ ಕಾಯ್ದೆಯಿಂದ ಮುಸ್ಲಿಮರಿಗೆ ಧಕ್ಕೆಯಿಲ್ಲ. ದೇಶದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸುತ್ತಿಲ್ಲ. ಪೌರತ್ವ ಕಾಯ್ದೆಯನ್ನು ಅಸ್ತ್ರವಾಗಿಸಿಕೊಂಡು ಕಾಂಗ್ರೆಸ್ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದು, ರಾಜಕೀಯವಾಗಿ ಆಡವಾಡುತ್ತಿದೆ ಎಂದು  ಆರೋಪಿಸಿದ್ದಾರೆ. 

ಕಳೆದ 6 ವರ್ಷದಿಂದ  ಕಾಂಗ್ರೆಸ್​ಗೆ ಯಾವ ವಿಷಯಗಳು ಸಿಕ್ಕಿರಲಿಲ್ಲ. ಈಗ ಪೌರತ್ವ ಕಾಯ್ದೆ ವಿಚಾರವಾಗಿ ದೇಶದಲ್ಲಿ ಬೆಂಕಿಹೊತ್ತಿಸುವ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್​ ಕಾಂಗ್ರೆಸ್ ಬೌದ್ದಿಕವಾಗಿ, ವೈಚಾರಿಕ, ಸಂಘಟನಾತ್ಮಕವಾಗಿ ದಿವಾಳಿಯಾಗಿದೆ.  ದಿವಾಳಿಯಾಗಿರುವುದನ್ನು ಸರಿಪಡಿಸಿಕೊಳ್ಳಲು ಈ ಕಾಯ್ದೆಯನ್ನಿಟ್ಟುಕೊಂಡು ತಂತ್ರಗಾರಿಕೆ ನಡೆಸುತ್ತಿದೆ ಎಂದು ಟೀಕಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com