ಎನ್ಆರ್'ಸಿ ಬಗ್ಗೆ ಸರ್ಕಾರದಿಂದ ಯಾವುದೇ ಸ್ಪಷ್ಟನೆಗಳಿಲ್ಲ: ಶಾಸಕ ಯುಟಿ ಖಾದರ್

ಎನ್ಆರ್'ಸಿ ಅನುಷ್ಠಾನಕ್ಕಾಗಿ ಪೌರತ್ವ ಕಾಯ್ದೆಯನ್ನು ತರಲಾಗಿದ್ದು, ಗೊಂದಲಕ್ಕೆ ಕಾರಣವಾಗಿರುವ ರಾಷ್ಟ್ರೀಯ ಪೌರತ್ವ ಕಾಯ್ದೆ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ರಾಜ್ಯದಲ್ಲಿ ಜಾರಿಗೆ ತರಲು ಅವಕಾಶ ನೀಡುವುದಿಲ್ಲ ಎಂದು ಶಾಸಕ ಯು.ಟಿ.ಖಾದರ್ ಅವರು ಹೇಳಿದ್ದಾರೆ. 
ಶಾಸಕ ಯುಟಿ ಖಾದರ್
ಶಾಸಕ ಯುಟಿ ಖಾದರ್

ಮಂಗಳೂರು: ಎನ್ಆರ್'ಸಿ ಅನುಷ್ಠಾನಕ್ಕಾಗಿ ಪೌರತ್ವ ಕಾಯ್ದೆಯನ್ನು ತರಲಾಗಿದ್ದು, ಗೊಂದಲಕ್ಕೆ ಕಾರಣವಾಗಿರುವ ರಾಷ್ಟ್ರೀಯ ಪೌರತ್ವ ಕಾಯ್ದೆ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ರಾಜ್ಯದಲ್ಲಿ ಜಾರಿಗೆ ತರಲು ಅವಕಾಶ ನೀಡುವುದಿಲ್ಲ ಎಂದು ಶಾಸಕ ಯು.ಟಿ.ಖಾದರ್ ಅವರು ಹೇಳಿದ್ದಾರೆ. 

ಶೀಘ್ರದಲ್ಲೇ ರಾಜ್ಯದಲ್ಲಿಯೂ ಎನ್ಆರ್'ಸಿ ಜಾರಿಗೆ ತರಲಾಗುತ್ತದೆ ಎಂಬ ಸರ್ಕಾರ ಘೋಷಣೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಬಿಜೆಪಿ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. 

ಇತ್ತೀಚೆಗಷ್ಟೇ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಘೋಷಣೆಯೊಂದನ್ನು ಮಾಡಿದ್ದರು. ರಾಜ್ಯದಲ್ಲಿಯೂ ಎನ್ಆರ್'ಸಿ ಜಾರಿಗೆ ತರುವುದಾಗಿ ಹೇಳಿದ್ದರು. ಇದು ಮುಸ್ಲಿಮರಲ್ಲಿ ಆತಂಕ ಸೃಷ್ಟಿಸಿದೆ. ಎನ್ಆರ್'ಸಿ ರಾಜ್ಯ ಸರ್ಕಾರ ಇನ್ನೂ ಈ ಬಗ್ಗೆ ಸ್ಪಷ್ಟನೆಗಳನ್ನು ನೀಡಿಲ್ಲ. ಅಗತ್ಯ ದಾಖಲಾತಿಗಳ ಬಗ್ಗೆಯೂ ಮಾಹಿತಿ ನೀಡಿಲ್ಲ ಎಂದು ತಿಳಿಸಿದ್ದಾರೆ. 

ಪೌರತ್ವ ಮಸೂದೆ ಎಂದರೇನು?
ಬಾಂಗ್ಲಾದೇಶ, ಪಾಕಿಸ್ತಾನ, ಆಫ್ಘಾನಿಸ್ತಾನ ದೇಶಗಳಲ್ಲಿ ಧಾರ್ಮಿಕ ಕಿರುಕುಳ ಅನುಭವಿಸಿದ ಕಾರಣಕ್ಕೆ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮೇತರರು. ಅಂದರೆ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿ ಮತ್ತು ಕ್ರೈಸ್ತರಿಗೆ ಭಾರತೀಯ ಪೌರತ್ವ ನೀಡಲು ಕೇಂದ್ರ ಸರ್ಕಾರ ಪೌರತ್ವ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಿದೆ. ಜೊತೆಗೆ ಹೀಗೆ ಪೌರತ್ವ ಪಡೆಯಲು, ವಲಸಿಗರು ಭಾರತದಲ್ಲಿ ಕನಿಷ್ಠ 11 ವರ್ಷ ನೆಲೆಸಿರಬೇಕು ಎಂಬ ನಿಯಮವನ್ನು ಸರ್ಕಾರ 6 ವರ್ಷಕ್ಕೆ ಇಳಿಸಿದೆ. ಆದರೆ, ಧರ್ಮದ ಆಧಾರದಲ್ಲಿ ಪೌರತ್ವ ನೀಡುವುದಕ್ಕೆ ಈಶಾನ್ಯ ರಾಜ್ಯಗಳ ಹಲವು ಸಂಘಟನೆಗಳು ವಿರೋಧ ಹೊಂದಿವೆ. 

ಎನ್ಆರ್'ಸಿ ಎಂದರೇನು?
ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಮಸೂದೆಯು, ದೇಶದಲ್ಲಿ ನೆಲೆಸಿರುವ ಅಕ್ರಮ ವಲಸಿಗರನ್ನು ದೇಶದಿಂದ ಹೊರಹಾಕುವ ಉದ್ದೇಶ ಹೊಂದಿದೆ. ಮೊದಲ ಹಂತದಲ್ಲಿ ಸುಪ್ರೀಂಕೋರ್ಟ್ ಸೂಚನೆ ಅನ್ವಯ ಇದನ್ನು ಅಸ್ಸಾಂನಲ್ಲಿ ಜಾರಿಗೆ ತರಲಾಗಿತ್ತು. ಅಲ್ಲಿ ಇತ್ತೀಚೆಗೆ ಪ್ರಕಟಿಸಲಾದ ಅಂತಿಮ ವರದಿ ಅನ್ವಯ, 30 ಲಕ್ಷ ಜನರನ್ನು ಅಕ್ರಮ ನಿವಾಸಿಗಳು ಎಂದು ಘೋಷಿಸಲಾಗಿದೆ. ಆದರೆ, ಇವರಿಗೆಲ್ಲಾ ವಿದೇಶಿಗರ ಮೇಲ್ಮನವಿ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಹಕ್ಕನ್ನು ಕಲ್ಪಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com