ಸರ್ಕಾರವೇ ಮುಂದೆ ನಿಂತು ಪ್ರತಿಭಟನಾಕಾರರನ್ನು ಕೊಂದಿದೆ: ಹೆಚ್.ಡಿ.ಕುಮಾರಸ್ವಾಮಿ

ಸರ್ಕಾರವೇ ಮುಂದೆ ನಿಂತು ಪ್ರತಿಭಟನಾಕಾರರನ್ನು ಹತ್ಯೆ ಮಾಡಿದೆ. ಇದರ ಹೊಣೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೊರಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ. 
ಹೆಚ್.ಡಿ.ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸರ್ಕಾರವೇ ಮುಂದೆ ನಿಂತು ಪ್ರತಿಭಟನಾಕಾರರನ್ನು ಹತ್ಯೆ ಮಾಡಿದೆ. ಇದರ ಹೊಣೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೊರಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ. 

ನಿಷೇಧಾಜ್ಞೆ ನಡುವೆಯೂ ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಇಬ್ಬರು ಪೊಲೀಸರ ಗುಂಡಿಗೆ ಬಲಿಯಾಗಿದ್ದರು. ಪ್ರತಿಭಟನೆ, ಹಿಂಸಾಚಾರ ನಡೆಯುತ್ತಿದ್ದ ವೇಳೆ ಭದ್ರತೆಗೆ ನಿಂತಿದ್ದ ಪೊಲೀಸರು ಮಾತುಕತೆ ನಡೆಸುತ್ತಿದ್ದು, ಈ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. 

ವಿಡಿಯೋದಲ್ಲಿ ಫೈರ್ ಮಾಡಿದರೂ, ಒಂದು ಗುಂಡೂ ಕೂಡ ಬೀಳಲಿಲ್ಲ. ಒಬ್ಬರೂ ಸಾಯಲಿಲ್ಲ ಎಂದು ಪೊಲೀಸ್ ಇಲಾಖೆಯ ಸಮವಸ್ತ್ರದಲ್ಲಿರುವ ಪೊಲೀಸ್ ಒಬ್ಬರು ಇತರೆ ಪೊಲೀಸರಿಗೆ ಹೇಳುತ್ತಿರುವುದು ಕಂಡು ಬಂದಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. 

ವಿಡಿಯೋ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು, ಫೈರ್ ಮಾಡಿದೆವು. ಒಂದು ಗುಂಡೂ ಬಾಳ್ಲಿಲ್ವಲ್ಲ. ಇದು ಮಂಗಳೂರು ಪ್ರತಿಭಟನೆ ವೇಳೆ ಹೋರಾಟಗಾರರನ್ನು ಕೊಂದ ಪೊಲೀಸ್ ಅಧಿಕಾರಿಯೊಬ್ಬರ ಮಾತು. ಸರ್ಕಾರವೇ ಮುಂದೆ ನಿಂತು ಪ್ರತಿಭಟನಾಕಾರರನ್ನು ಕೊಂದಿದೆಎಂಬುದು ಈ ವಿಡಿಯೋ ಸಾಕ್ಷಿಯಾಗಿ ನಿಂತಿದೆ. ಇದರ ಹೊಣೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಹೊರಬೇಕೆಂದು ಆಗ್ರಹಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com