ನಾಳೆ ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

ಇತ್ತೀಚೆಗ ನಡೆದ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಆಯ್ಕೆಯಾಗಿರುವ ನೂತನ ವಿಧಾನಸಭಾ ಸದಸ್ಯರು ನಾಳೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನೂತನ ಶಾಸಕರು
ನೂತನ ಶಾಸಕರು

ಬೆಂಗಳೂರು: ಇತ್ತೀಚೆಗ ನಡೆದ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಆಯ್ಕೆಯಾಗಿರುವ ನೂತನ ವಿಧಾನಸಭಾ ಸದಸ್ಯರು ನಾಳೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ವಿಧಾನಸೌಧದ ಬಾಂಕ್ವೇಟ್ ಹಾಲ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಕೆ.ಆರ್.ಪುರ ಕ್ಷೇತ್ರದ ಭೈರತಿ ಬಸವರಾಜ, ಹೊಸಕೋಟೆಯ ಶರತ್ ಬಚ್ಚೇಗೌಡ, ಯಶವಂತಪುರದ ಎಸ್.ಟಿ.ಸೋಮಶೇಖರ್, ಶಿವಾಜಿನಗರದ ರಿಝ್ವನ್ ಅರ್ಶದ್, ಚಿಕ್ಕಬಳ್ಳಾಪುರದ ಡಾ.ಕೆ.ಸುಧಾಕರ್, ಹುಣಸೂರ ಕ್ಷೇತ್ರದ ಎಚ್.ಪಿ.ಮಂಜುನಾಥ್, ಕೆ.ಆರ್.ಪೇಟೆ ಕ್ಷೇತ್ರದ ಕೆ.ಸಿ.ನಾರಾಯಣಗೌಡ, ಹಿರೇಕೆರೂರು ಕ್ಷೇತ್ರದ ಬಿ.ಸಿ.ಪಾಟೀಲ್, ಗೋಕಾಕ್ ಕ್ಷೇತ್ರದ ರಮೇಶ್ ಜಾರಕಿಹೊಳಿ, ಅಥಣಿಯ ಮಹೇಶ್ ಕಮಟಳ್ಳಿ, ರಾಣೆಬೆನ್ನೂರಿನ ಅರುಣ್‌ಕುಮಾರ್, ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಕೆ.ಗೋಪಾಲಯ್ಯ, ವಿಜಯನಗರದ ಆನಂದ್‌ಸಿಂಗ್, ಕಾಗವಾಡದ ಶ್ರೀಮಂತಪಾಟೀಲ್, ಯಲ್ಲಾಪುರದ ಶಿವರಾಮ್ ಹೆಬ್ಬಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಡಿಸೆಂಬರ್ 5 ರಂದು ನಡೆದಿದ್ದ ಚುನಾವಣೆಯಲ್ಲಿ 12 ಬಿಜೆಪಿ, 2 ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದರು. ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಆಯ್ಕೆಯಾಗಿದ್ದಾರೆ. ಜೆಡಿಎಸ್ ಯಾವುದೇ ಕ್ಷೇತ್ರದಲ್ಲೂ ಗೆಲುವು ಸಾಧಿಸಲು ಸಾಧ್ಯವಾಗಿರಲಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com