ಸಿದ್ದರಾಮಯ್ಯ ಮಂಗಳೂರಿಗೆ ಹೋಗಿ ಮಾಡುವಂಥದ್ದೇನಿಲ್ಲ: ಸಚಿವ ಆರ್.ಅಶೋಕ್

ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಗಲಭೆ ಬಳಿಕ ಮಂಗಳೂರಿನಲ್ಲಿ ಈಗ ಶಾಂತಿ ನೆಲೆಸಿದ್ದು, ಸಿದ್ದರಾಮಯ್ಯ  ಮಂಗಳೂರಿಗೆ ಹೋಗಿ ಮಾಡುವಂಥದ್ದು ಏನೂ ಇಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿರುಗೇಟು ನೀಡಿದರು.
ಆರ್ ಅಶೋಕ್
ಆರ್ ಅಶೋಕ್

ಬೆಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಗಲಭೆ ಬಳಿಕ ಮಂಗಳೂರಿನಲ್ಲಿ ಈಗ ಶಾಂತಿ ನೆಲೆಸಿದ್ದು, ಸಿದ್ದರಾಮಯ್ಯ  ಮಂಗಳೂರಿಗೆ ಹೋಗಿ ಮಾಡುವಂಥದ್ದು ಏನೂ ಇಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿರುಗೇಟು ನೀಡಿದರು.
 
ಡಾಲರ್ಸ್ ಕಾಲೋನಿಯಲ್ಲಿ ಮುಖ್ಯಮಂತ್ರಿ ಭೇಟಿ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಸದ್ಯಕ್ಕೆ ಶಾಂತಿ ನೆಲೆಸಿದೆ. ಶಾಂತಿ ನೆಲೆಸಲು ಕಾಂಗ್ರೆಸ್ ನಾಯಕರು ಮೊದಲು ಬಿಡಲಿ. ಮಾಜಿ ಸಚಿವ ಯು.ಟಿ ಖಾದರ್ ಹೇಳಿಕೆಯಿಂದಲೇ ಮಂಗಳೂರಿನಲ್ಲಿ ಇಷ್ಟೆಲ್ಲ ಸಮಸ್ಯೆ ಆಗಿದೆ. ಪ್ರತಿಭಟನೆಗೆ ಕಾಂಗ್ರೆಸ್ ನಾಯಕರೇ ಕಾರಣ ಎಂದು ಅವರು ಕಿಡಿ ಕಾರಿದರು.

ದೆಹಲಿ ನಾಯಕರ ಭೇಟಿ ಯಾವಾಗ ಆಗುತ್ತದೆ ಆ ಬಳಿಕನಷ್ಟೇ  ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳುವ ಮೂಲಕ ಸಂಪುಟ ವಸ್ತರಣೆಗೆ ಇನ್ನಷ್ಟು ತಡವಾಗಲಿದೆ ಎಂದು ಅವರು ಸ್ಪಷ್ಟಡಿಸಿದರು. 

ಸದ್ಯ ಪೌರತ್ವ ಕಾಯ್ದೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಈಗ ನಮ್ಮ ವರಿಷ್ಠರಿಗೆ ಬಿಡುವು ಇಲ್ಲ. ಸಂಪುಟ ವಿಸ್ತರಣೆ ಬಗ್ಗೆ ದೆಹಲಿ ನಾಯಕರ ಜೊತೆ ಸಮಾಲೋಚನೆ ಮಾಡಬೇಕಿದೆ. ಅಮಿತ್ ಶಾ, ಜೆ ಪಿ ನಡ್ಡಾ ಅವರ ಜೊತೆ  ಮುಖ್ಯಮಂತ್ರಿ ಚರ್ಚೆ ಮಾಡಬೇಕಿದೆ. ದೊಡ್ಡ ಪ್ರಮಾಣದಲ್ಲಿ ಸಂಪುಟ ವಿಸ್ತರಣೆ ಮಾಡಲಾಗುತ್ತಿದೆ ಎಂದು ಅವರು ಪರೋಕ್ಷವಾಗಿ ಸಂಪುಟ ಪುನರಾಚನೆಯಾಗಲಿದೆ. ಹೀಗಾಗಿ ದೆಹಲಿ ನಾಯಕರ ಭೇಟಿ ಬಳಿಕವೇ ಸಂಪುಟ ವಿಸ್ತರಣೆ ಆಗಲಿದೆ ಎಂದು ಅವರು ತಿಳಿಸಿದರು.

ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಹಿಂಸಾಚಾರ ನಡೆದಿದ್ದು ಈ ವೇಳೆ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com