ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಮಹಾ ನಿರ್ದೇಶಕರಿಗೆ ಕಾಂಗ್ರೆಸ್ ದೂರು 

ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವಂತೆ ಪ್ರಚೋದನಾತ್ಮಕ ಹೇಳಿಕೆಗಳನ್ನು ಕೊಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೆಪಿಸಿಸಿ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದೆ.
ಸಂಸದ ತೇಜಸ್ವಿ ಸೂರ್ಯ,ರೇಣುಕಾಚಾರ್ಯ
ಸಂಸದ ತೇಜಸ್ವಿ ಸೂರ್ಯ,ರೇಣುಕಾಚಾರ್ಯ

ಬೆಂಗಳೂರು: ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವಂತೆ ಪ್ರಚೋದನಾತ್ಮಕ ಹೇಳಿಕೆಗಳನ್ನು ಕೊಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೆಪಿಸಿಸಿ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದೆ.

ಸಚಿವರಾದ ಸಿ.ಟಿ. ರವಿ, ಶಾಸಕ ಎಂಪಿ ರೇಣುಕಾಚಾರ್ಯ ಹಾಗೂ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಕಾಂಗ್ರೆಸ್ ಮುಖಂಡ ನಟರಾಜ ಗೌಡ ನೇತೃತ್ವದಲ್ಲಿ ಡಿಜಿಪಿ ನೀಲಮಣಿರಾಜು ಅವರಿಗೆ ಸೋಮವಾರ ದೂರು ಸಲ್ಲಿಸಿತು

ಕೇಂದ್ರದ ಅಸಂವಿಧಾನಿಕ ಪೌರತ್ವ ಕಾಯ್ದೆಯನ್ನು ವಿರೋಧಿಸಿ ಬೆಂಗಳೂರು ಸೇರಿದಂತೆ ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ವಕೀಲರು, ಪ್ರಾಧ್ಯಾಪಕರು ಚಿತ್ರನಟರು ಸೇರಿದಂತೆ ಸಮಾಜದ ಎಲ್ಲಾ ವರ್ಗದ ಜನರು ಪಾಲ್ಗೊಂಡಿದ್ದಾರೆ. ಇದು ಸರ್ಕಾರಕ್ಕೆ ಮುಜುಗರ ಉಂಟು ಮಾಡಿದೆ ಎಂದು ಹೇಳಿದ್ದಾರೆ.

ಶಾಂತಿಯುತವಾಗಿರುವ  ಪ್ರತಿಭಟನೆಯನ್ನು ಎದುರಿಸಲು ಬಿಜೆಪಿ ನಾಯಕರಿಂದ ಸಾಧ್ಯವಾಗುತ್ತಿಲ್ಲ. ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಆಗುವಂತೆ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com