ನಗರ ನಕ್ಸಲ್‌ ಹೇಳಿಕೆ: ಮೋದಿ ದೇಶದ ಜನರಲ್ಲಿ ಕ್ಷಮೆ‌ಕೇಳಲಿ- ಮಾಜಿ ಸಚಿವ ಡಿ.ಕೆ.ಶಿವಕುಮಾರ್

ತಮ್ಮ ವಿರುದ್ಧ ಧ್ವನಿ ಎತ್ತಿದ ಯುವಕರು, ವಿದ್ಯಾರ್ಥಿಗಳು, ಬುದ್ಧಿಜೀವಿಗಳನ್ನು ನಗರ ನಕ್ಸಲರು ಎಂದು ಕರೆದು ಅವಮಾನ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಈ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ.
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್

ಬೆಂಗಳೂರು: ತಮ್ಮ ವಿರುದ್ಧ ಧ್ವನಿ ಎತ್ತಿದ ಯುವಕರು, ವಿದ್ಯಾರ್ಥಿಗಳು, ಬುದ್ಧಿಜೀವಿಗಳನ್ನು ನಗರ ನಕ್ಸಲರು ಎಂದು ಕರೆದು ಅವಮಾನ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಈ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ.

ಸದಾಶಿವನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ ಸಿಆರ್ ವಿರುದ್ಧ ಯುವಕರು, ವಿದ್ಯಾರ್ಥಿಗಳು ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು, ಬುದ್ಧಿಜೀವಿಗಳು, ವಿದ್ಯಾವಂತರು ಯಾವುದೇ ಪಕ್ಷಕ್ಕೆ ಸೇರಿದವರಲ್ಲ, ಯಾವುದೇ ಪಕ್ಷದ ಸದಸ್ಯರೂ ಅಲ್ಲ. ಯಾವ ಪಕ್ಷವೂ ಈ ರೀತಿ ಮಾಡಿ ಎಂದು ನಿರ್ದೇಶನ ಕೊಟ್ಟಿಲ್ಲ. ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಪ್ರತ್ಯೇಕವಾಗಿ ಪ್ರತಿಭಟನೆ ಮಾಡುತ್ತಿವೆ. ಇವುಗಳ ಹೊರತಾಗಿ, ಅನೇಕ ಚಿಂತಕರು, ಯುವ ಸಮೂಹ ಯಾವುದೇ ರಾಜಕೀಯ ಅಧಿಕಾರದ ನಿರೀಕ್ಷೆ ಇಲ್ಲದೇ ಈ ದೇಶದ ಸಂವಿಧಾನ, ಸ್ವಾಭಿಮಾನ ಉಳಿಸಲು ಮುಂದೆ ಬರುತ್ತಿದ್ದಾರೆ. ಆದರೆ ನಮ್ಮ ದೇಶದ ಪ್ರಧಾನಮಂತ್ರಿಗಳು ಇವರನ್ನು ನಗರ ನಕ್ಸಲರು ಎಂದು ಕರೆಯುತ್ತಿದ್ದಾರೆ. ಇದಕ್ಕಿಂತ ದೊಡ್ಡ ಅವಮಾನ, ದೇಶದ್ರೋಹ ಇನ್ನೊಂದಿಲ್ಲ ಎಂದು ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು‌.

ದೇಶ ಆರ್ಥಿಕವಾಗಿ ನರಳುತ್ತಿರುವ ಸಂದರ್ಭದಲ್ಲಿ, ಜನರ ಸ್ವಾಭಿಮಾನದ ಬದುಕಿಗೆ ಕಳಂಕ ತಂದು ಜೀವನದಲ್ಲಿ ಸರ್ಕಾರ ಚೆಲ್ಲಾಟ ಆಡುತ್ತಿದೆ. ನಿಮಗೆ ಮತ ಹಾಕಿದ ಯುವಕರು ಸಂಸತ್ತಿನೊಳಗೆ ಬಂದು ನಿಮ್ಮನ್ನು ಪ್ರಶ್ನೆಸಲು ಆಗುವುದಿಲ್ಲ. ಹೀಗಾಗಿ ಅವರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಆದರೆ ಅವರ ಬಾಯಿ ಮುಚ್ಚಿಸುವ ಪ್ರಯತ್ನ, ಅವರು ನಿಮ್ಮ ವಿರುದ್ಧ ಧ್ವನಿ ಎತ್ತಿದರು ಎಂಬ ಮಾತ್ರಕ್ಕೆ ಅವರನ್ನು ನಗರ ನಕ್ಸಲರು ಎಂದು ಕರೆಯುವುದು ಖಂಡನೀಯ. ಇದು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಮಾನ ಎಂದು ಅವರು ಕಿಡಿಕಾರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com