'ಮೋದಿ ಅಧುನಿಕ ಭಸ್ಮಾಸುರ: ಭಾವನಾತ್ಮಕ ವಿಷಯ ಮುಂದಿರಿಸಿ ದಾರಿ ತಪ್ಪಿಸುತ್ತಿರುವ ಬಿಜೆಪಿ'

ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿಯಂತಹ ಭಾವನಾತ್ಮಕ ವಿಷಯಗಳನ್ನು ಜನರ ಮುಂದಿಟ್ಟು, ಕೇಂದ್ರ ಸರ್ಕಾರದ ವಿವಿಧ ವೈಫಲ್ಯಗಳನ್ನು ಮುಚ್ಚಿಡಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ ವಿ.ಎಸ್‌. ಉಗ್ರಪ್ಪ ಆರೋಪಿಸಿದರು.
ನರೇಂದ್ರ  ಮೋದಿ
ನರೇಂದ್ರ ಮೋದಿ

ಹುಬ್ಬಳ್ಳಿ: ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿಯಂತಹ ಭಾವನಾತ್ಮಕ ವಿಷಯಗಳನ್ನು ಜನರ ಮುಂದಿಟ್ಟು, ಕೇಂದ್ರ ಸರ್ಕಾರದ ವಿವಿಧ ವೈಫಲ್ಯಗಳನ್ನು ಮುಚ್ಚಿಡಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ ವಿ.ಎಸ್‌. ಉಗ್ರಪ್ಪ ಆರೋಪಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಓರ್ವ ಆಧುನಿಕ ಭಸ್ಮಾಸುರ ಎಂದು ಟೀಕಿಸಿದರು. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಾಗುವುದು ಎಂದು ಭರವಸೆ ನೀಡಲಾಗಿತ್ತು. ಉದ್ಯೋಗ ಸೃಷ್ಟಿಸಿರುವುದಿರಲಿ, ಇರುವ ಉದ್ಯೋಗಗಳೂ ಉಳಿಯುತ್ತಿಲ್ಲ. ಭ್ರಷ್ಟಾಚಾರ ನಿಗ್ರಹದಲ್ಲಿಯೂ ವಿಫಲವಾಗಿದೆ ಎಂದು ಆರೋಪಿಸಿದರು.

ಕಪ್ಪು ಹಣ ತರುವುದು, ಉದ್ಯೋಗ ಸೃಷ್ಟಿ, ದೇಶದ ಆರ್ಥಿಕ ದುಸ್ಥಿತಿ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಪೌರತ್ವ (ತಿದ್ದುಪಡಿ) ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿಯಂತಹ ಭಾವನಾತ್ಮಕ ವಿಷಯಗಳನ್ನು ಬಿಜೆಪಿ ಮುಂದೆ ಮಾಡಿದೆ ಎಂದು ಆರೋಪಿಸಿದರು.

ಭ್ರಷ್ಟಾಚಾರ ನಿಗ್ರಹದಲ್ಲಿಯೂ ವಿಫಲವಾಗಿದೆ. ಮೋದಿ, ಆಧುನಿಕ ಭಸ್ಮಾಸುರ’ ಎಂದು ಟೀಕಿಸಿದರು. ‘ದೇಶದ ಆರ್ಥಿಕ ಕುಸಿತವನ್ನು ತಡೆಯದಿದ್ದರೆ, ಮುಂದೊಂದು ದಿನ ದೇಶ ಬಿಜೆಪಿ ಮುಕ್ತವಾಗಲಿದೆ ಎಂದು ಬಿಜೆಪಿಯ ರಾಜ್ಯಸಭೆ ಸದಸ್ಯ ಸುಬ್ರಮಣ್ಯಂ ಸ್ವಾಮಿ ಹೇಳಿದ್ದಾರೆ. ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತವಾಗುತ್ತಿದೆ. ಭರವಸೆ ಈಡೇರಿಸದೆ, ಭಾವನಾತ್ಮಕ ವಿಷಯದ ಮೂಲಕ ಜನರ ದಾರಿಯನ್ನು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್‌ ಶಾ ಮಾಡುತ್ತಿದ್ದಾರೆ’ ಎಂದು ದೂರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com