ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಗೊಂದಲದ ಗೂಡು: ಯಡಿಯೂರಪ್ಪ

ರಾಜ್ಯದಲ್ಲಿ ಅಸ್ಥಿತ್ವದಲ್ಲಿರುವ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಗೊಂದಲದ ಗೂಡಾಗುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಲೇವಡಿ ಮಾಡಿದ್ದಾರೆ....
ಬಿಎಸ್ ಯಡಿಯೂರಪ್ಪ , ಪಿ ಮುರುಳಿಧರ ರಾವ್ ಮತ್ತು ಕಿರಣ್ ಮಹೇಶ್ವರಿ
ಬಿಎಸ್ ಯಡಿಯೂರಪ್ಪ , ಪಿ ಮುರುಳಿಧರ ರಾವ್ ಮತ್ತು ಕಿರಣ್ ಮಹೇಶ್ವರಿ
ಬೆಂಗಳೂರು: ರಾಜ್ಯದಲ್ಲಿ ಅಸ್ಥಿತ್ವದಲ್ಲಿರುವ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಗೊಂದಲದ ಗೂಡಾಗುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಲೇವಡಿ ಮಾಡಿದ್ದಾರೆ.
ಲೋಕಸಭೆ ಚುನಾವಣೆ ಪೂರ್ವ ಸಿದ್ಧತೆ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಫೆಬ್ರವರಿ 6ರಂದು ತರಾತುರಿಯಲ್ಲಿ  ಬಜೆಟ್ ಮೀಟಿಂಗ್ ಕರೆಯಲಾಗಿದೆ ಎಂದರು, 
ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ನಿತ್ಯ ಕಚ್ಚಾಟದಲ್ಲಿ ತೊಡಗಿದ್ದಾರೆ, ಕಾಂಗ್ರೆಸ್ ಶಾಸಕರು ಬೀದಿಯಲ್ಲಿ ನಿಂತು ಮುಖ್ಯಮಂತ್ರಿ ಕಾರ್ಯವೈಖರಿ ಬಗ್ಗೆ ಟೀಕಿಸುತ್ತಾರೆ, ಸಿದ್ದರಾಮಯ್ಯ ಅವರಿಗೆ ದೇವೇಗೌಡ ಬಹಿರಂಗವಾಗಿಯೇ ಎಚ್ಚರಿಕೆ ಕೊಟ್ಟಿದ್ದಾರೆ, ಜೆಡಿಎಸ್ ಗೆ ಬೆಂಬಲ ಮುಂದುವರಿಸಬಾರದು ಎಂದು ಕಾಂಗ್ರೆಸ್ ನ 20 ಕ್ಕೂ ಹೆಚ್ಚು ಶಾಸಕರು ಹೇಳಿದ್ದಾರೆ, ಅವರೇ ಕಚ್ಚಾಡಿಕೊಂಡು ಸರ್ಕಾರ ಬೀಳಿಸಲಿದ್ದಾರೆ, ಅದಕ್ಕೆ ಬಿಜೆಪಿ ಜವಾಬ್ದಾರಿಯಲ್ಲ ಎಂದು ಹೇಳಿದ್ದಾರೆ. 
ಬರಪೀಡಿತ ಪ್ರದೇಶಗಳಿಗೆ ಬಿಜೆಪಿ ಪ್ರವಾಸ ಕೈಗೊಂಡ ನಂತರ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಬರ ಪರಿಹಾರಕ್ಕೆ ಮುಂದಾಗಿದೆ, ತಾವು ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾಗ ಸಮ್ಮಿಶ್ರ ಸರ್ಕಾರದ ಆಡಳಿತ ವೈಖರಿ ಬಗ್ಗೆ ಜನ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ ಎಂದು ದೂರಿದ್ದಾರೆ. 
ಇನ್ನೂ ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಲಿದ್ದು ಸುಮಾರು 22 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com