ಮೈತ್ರಿ ಸರ್ಕಾರಕ್ಕೆ ಕಂಟಕ: ಬಚಾವ್ ಮಾಡಲು ಆನಂದ್ ಸಿಂಗ್ ಡಿಸ್ಚಾರ್ಜ್!?

ಜನವರಿ 20ರಂದು ಬೆಂಗಳೂರು ಹೊರವಲಯದ ಈಗಲ್ ಟನ್ ರೆಸಾರ್ಟ್ ನಲ್ಲಿ ನಡೆದ ಗಲಾಟೆಯಲ್ಲಿ ಕಂಪ್ಲಿ ಶಾಸಕ ಗಣೇಶ್ ಅವರಿಂದ ಒದೆ ತಿಂದಿದ್ದ...
ಆನಂದ್ ಸಿಂಗ್
ಆನಂದ್ ಸಿಂಗ್
ಬೆಂಗಳೂರು: ಜನವರಿ 20ರಂದು ಬೆಂಗಳೂರು ಹೊರವಲಯದ ಈಗಲ್ ಟನ್ ರೆಸಾರ್ಟ್ ನಲ್ಲಿ ನಡೆದ ಗಲಾಟೆಯಲ್ಲಿ ಕಂಪ್ಲಿ ಶಾಸಕ ಗಣೇಶ್ ಅವರಿಂದ ಒದೆ ತಿಂದಿದ್ದ ಮತ್ತೊಬ್ಬ ಶಾಸಕ ಆನಂದ್ ಸಿಂಗ್ ತರಾತುರಿಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಆನಂದ್ ಸಿಂಗ್ ಸೋಮವಾರ ಸಂಜೆ ಇದ್ದಕ್ಕಿದ್ದಂತೆ ಡಿಸ್ಚಾರ್ಜ್ ಆಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಬುಧವಾರದಿಂದ ಬಜೆಟ್ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ಕಾಂಗ್ರೆಸ್ -ಜೆಡಿಎಸ್ ಸ್ಥಿತಿ ಸರಿಯಿಲ್ಲ ಎಂಬ ಉದ್ದೇಶದಿಂದ ಆನಂದ್ ಸಿಂಗ್ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ.
ವೈದ್ಯರ ಸಲಹೆ ಧಿಕ್ಕರಿಸಿ ಆನಂದ್ ಸಿಂಗ್ ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿಕೊಂಡಿದ್ದಾರೆ, ಡಿಸ್ಚಾರ್ಜ್ ಆದ ಮೇಲೆ 5 ದಿನಗಳ ಕಾಲ ವಿಶ್ರಾಂತಿ ಪಡೆಯಬೇಕು ಎಂದು ವೈದ್ಯರು ಸೂಚಿಸಿದ್ದರು, ನಡೆಯುವಾಗ ಆನಂದ್ ಸಿಂಗ್ ಕಾಲಿನಲ್ಲಿ ನೋವು ಕಾಣಿಸಿಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ  ಇನ್ನೂ ನಾಲ್ಕು ದಿನ ಆಸ್ಪತ್ರೆಯಲ್ಲಿ ವೈದ್ಯರು ಹೇಳಿದ್ದರು ಎಂದು ಮೂಲಗಳು ತಿಳಿಸಿವೆ.
ಶಾಸಕ ಗಣೇಶ್ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ, ಆದರೆ ಸಂತ್ರಸ್ತ ಆಸ್ಪತ್ರೆಯಲ್ಲಿದ್ದರೇ ಕೋರ್ಟ್ ಯಾವುದೇ ಕಾರಣಕ್ಕೂ ಜಾಮೀನು ನೀಡುವುದಿಲ್ಲ ಎಂಬುದು ಕಾಂಗ್ರೆಸ್ ತಿಳಿದಿದೆ, ಹೀಗಾಗಿ ಆನಂದ್ ಸಿಂಗ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಮೂಲಗಳು ಹೇಳಿವೆ.
ಕಾಂಗ್ರೆಸ್ ನಾಯಕರ ಆದೇಶದಂತೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ, ಆದರೆ ಅವರು ಮುಂದಿನ 15 ದಿನಗಳ ಕಾಲ ಎಲ್ಲಿ ರೆಸ್ಟ್ ಮಾಡಲಿದ್ದಾರೆ ಎಂಬುದು ಯಾರಿಗೂ ತಿಳಿದಿಲ್ಲ ಎಂದು ಹೇಳಲಾಗಿದೆ.
ಇನ್ನೂ ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಶಾಸಕ ಗಣೇಶ್ ಅವರನ್ನು ಶೀಘ್ರದಲ್ಲೇ ಬಂಧಿಸುವುದಾಗಿ ಗೃಹ ಸಚಿವ ಎಂ.ಬಿ ಪಾಟೀಲ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ, 
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಪೊಲೀಸರ ಬಗ್ಗೆ ಅನುಮಾನ ಬೇಡ, ಗಣೇಶ್ ಅವರನ್ನು ಬಂಧಿಸಲು ಪೊಲೀಸರು ಸಮರ್ಥರಿದ್ದಾರೆ, ಗಣೇಶ್ ಪದೇ ಪದೇ ಸ್ಥಳ ಬದಲಾವಣೆ ಮಾಡುತ್ತಿರುವುದರಿಂದ ಅವರನ್ನು ಟ್ರೇಸ್ ಮಾಡುವುದು ಸದ್ಯ ಕಷ್ಟವಾಗುತ್ತಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com