ಕೈಗಾರಿಕೆ ಅಭಿವೃದ್ಧಿಗಾಗಿ ಕಾಂಪೀಟ್‌ ವಿತ್‌ ಚೀನಾ ಯೋಜನೆ : ರಾಜ್ಯಪಾಲ ವಾಲಾ

ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರ ಜಿಲ್ಲಾ ಮಟ್ಟದಲ್ಲಿ ಕೈಗಾರಿಕೆ ಅಭಿವೃದ್ಧಿಗಾಗಿ ‘ಕಾಂಪೀಟ್‌ ವಿತ್‌ ಚೀನಾ’ಎಂಬ ನೂತನ ...
ವಜೂ ಭಾಯಿವಾಲಾ (ಸಂಗ್ರಹ ಚಿತ್ರ)
ವಜೂ ಭಾಯಿವಾಲಾ (ಸಂಗ್ರಹ ಚಿತ್ರ)
ಬೆಂಗಳೂರು: ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರ ಜಿಲ್ಲಾ ಮಟ್ಟದಲ್ಲಿ ಕೈಗಾರಿಕೆ ಅಭಿವೃದ್ಧಿಗಾಗಿ ‘ಕಾಂಪೀಟ್‌ ವಿತ್‌ ಚೀನಾ’ಎಂಬ ನೂತನ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಿದೆ ಎಂದು ರಾಜ್ಯಪಾಲ ವಜೂ ಭಾಯಿವಾಲಾ ಹೇಳಿದ್ದಾರೆ.
ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲರು,   ರಾಜ್ಯದಲ್ಲಿನ ಕೈಗಾರಿಕೆ ಅಭಿವೃದ್ಧಿಗಾಗಿ 9 ಜಿಲ್ಲೆಗಳಲ್ಲಿ ಕೈಗಾರಿಕೆ ಕ್ಲಸ್ಟರ್‌ ಸ್ಥಾಪನೆಗೆ ಮೈತ್ರಿ ಸರ್ಕಾರ ಮುಂದಾಗಿದೆ. ಇದಕ್ಕಾಗಿ ‘ಕಾಂಪೀಟ್‌ ವಿತ್‌ ಚೀನಾ’ಎಂಬ ನೂತನ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಪ್ರತಿ ಕ್ಲಸ್ಟರ್‌ ತನ್ನ ನಿರ್ದಿಷ್ಟ ಸಾಮರ್ಥ್ಯದ ಮೇಲೆ ಕಾರ್ಯನಿರ್ವಹಿಸುವಂತೆ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ ಎಂದಿದ್ದಾರೆ.
ಕರ್ನಾಟಕ ರಾಜ್ಯ 2018ನೇ ಸಾಲಿನ ಬಂಡವಾಳ ಹೂಡಿಕೆ ಆಕರ್ಷಿಸುವುದರಲ್ಲಿ ರಾಷ್ಟ್ರದಲ್ಲಿಯೇ ಪ್ರಥಮ ಸ್ಥಾನ ಪಡೆದಿದ್ದು, ಕೈಗಾರಿಕೆ ನೀತಿ 2014-19ರ ಅಡಿಯಲ್ಲಿ 3.49 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಹೊಂದಿದೆ. 10.28 ಲಕ್ಷ ಜನರಿಗೆ ಉದ್ಯೋಗ ನೀಡುವ 1,958 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
2.5 ಲಕ್ಷ ಯುವಕರಿಗೆ ತರಬೇತಿ ಯುವಜನತೆಗೆ ಉದ್ಯೋಗಾವಕಾಶ ಸೃಷ್ಟಿಸಲು ರಾಜ್ಯ ಸರ್ಕಾರ ಸದಾ ಶ್ರಮಿಸುತ್ತಿದ್ದು, 2018-19ರಲ್ಲಿ 2.5 ಲಕ್ಷ ಯುವಕರಿಗೆ ತರಬೇತಿ ನೀಡುವ ಮಹತ್ವಾಕಾಂಕ್ಷಿ ಯೋಜನೆಯನ್ನು ಅನುಷ್ಠಾನಗೊಳಿಸಿದೆ ಎಂದು ರಾಜ್ಯಪಾಲ ವಜೂಭಾಯಿವಾಲಾ ಹೇಳಿದ್ದಾರೆ.
ಯುವಜನತೆಗೆ ಉದ್ಯೋಗ ಪಡೆಯಲು ಸಹಕಾರಿಯಾಗುವಂತೆ ಅತ್ಯಾಧುನಿಕ ತಂತ್ರಜ್ಞಾನಗಳಲ್ಲಿ ತರಬೇತಿ ನೀಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com