ಆಡಿಯೋದಲ್ಲಿರುವ ಧ್ವನಿ ಬಿಎಸ್ ವೈ ಅವರದ್ದು ಎಂದು ಹೇಳಿಲ್ಲ: ಸಿಎಂ ಎಚ್ ಡಿ ಕುಮಾರಸ್ವಾಮಿ

ಆಪರೇಷನ್ ಕಮಲ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ತಮ್ಮ ಹೇಳಿಕೆಯಿಂದ ಯೂ ಟರ್ನ್ ಹೊಡೆದಿದ್ದು, ಆಡಿಯೋದಲ್ಲಿರುವ ಧ್ವನಿ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಅವರದ್ದು ಎಂದು ತಾವು ಹೇಳಿಯೇ ಇಲ್ಲ ಎಂದು ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಮಂಗಳೂರು: ಆಪರೇಷನ್ ಕಮಲ ಆಡಿಯೋದಲ್ಲಿರುವ ಧ್ವನಿ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಅವರದ್ದು ಎಂದು ತಾವು ಹೇಳಿಯೇ ಇಲ್ಲ ಎಂದು ಹೇಳಿದ್ದಾರೆ.
ಆಪರೇಷನ್ ಕಮಲದ ಬಗ್ಗೆ ಶುಕ್ರವಾರ ಮುಖ್ಯಮಂತ್ರಿ ಬಿಡುಗಡೆ ಮಾಡಿದ್ದ ಆಡಿಯೊದಲ್ಲಿರುವ ಧ್ವನಿ ಬಿಎಸ್ ಯಡಿಯೂರಪ್ಪ ಅವರದು ಅಲ್ಲ ಎಂದು ಸ್ಪೀಕರ್ ನೀಡಿರುವ ಹೇಳಿಕೆಗೆ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ ಅವರು, ಆಡಿಯೋದಲ್ಲಿ ಯಡಿಯೂರಪ್ಪ ಅವರ ಧ್ವನಿ ಇದೆ ಎಂದು ತಾವು ಹೇಳಿಯೇ ಇಲ್ಲ ಎಂದು ತಮ್ಮ ಹೇಳಿಕೆಯನ್ನು ಬದಲಿಸಿದ್ದಾರೆ. 
ಅಂತೆಯೇ 'ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಆಡಿಯೋದಲ್ಲಿ ಸ್ಪೀಕರ್ ರಮೇಶ್ ಕುಮಾರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಪ್ರಧಾನಿ ಮೋದಿ ಅವರ  ಹೆಸರುಗಳನ್ನು ಪ್ರಸ್ತಾಪಿಸಲಾಗಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವ ಮಾತು ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಎಚ್ ಡಿಕೆ ಒತ್ತಾಯಿಸಿದ್ದಾರೆ.
ಆಡಿಯೋ ಬಗ್ಗೆ ಪ್ರಧಾನ ಮಂತ್ರಿ ಅವರು ತನಿಖೆಗೆ ತೀರ್ಮಾನಿಸಿ ಸಹಕಾರ ಕೊಟ್ಟರೆ ಅವರ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡುತ್ತೇನೆ. ಯಡಿಯೂರಪ್ಪ ಅವರು ಇದನ್ನು ಮಿಮಿಕ್ರಿ ಎಂದಿದ್ದಾರೆ ಅದರ ಸತ್ಯಾಸತ್ಯತೆ ಹೊರ ಬರಬೇಕು. ಈ ನಿಟ್ಟಿನಲ್ಲಿ ತನಿಖೆ ಮಾಡಬೇಕು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಪ್ರಕರಣವನ್ನು ಎಸಿಬಿ ತನಿಖೆ ವಹಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಮುಂದೆ ಏನಾಗಲಿದೆ ನೋಡೋಣ ಎಂದು ಪ್ರತಿಕ್ರಿಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com