ಶಾಸಕ ಉಮೇಶ್ ಜಾಧವ್‌ ಒಂದೆರಡು ದಿನದಲ್ಲಿ ರಾಜೀನಾಮೆ, ಬಿಜೆಪಿ ಸೇರ್ಪಡೆ ಸಾಧ್ಯತೆ

ಕಾಂಗ್ರೆಸ್‌ ಬಂಡಾಯ ಶಾಸಕ ಡಾ. ಉಮೇಶ್‌ ಜಾಧವ್ ಅವರು ಒಂದೆರಡು ದಿನದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಬಿಜೆಪಿ ಟಿಕೆಟ್‌ನಿಂದ....

Published: 12th February 2019 12:00 PM  |   Last Updated: 12th February 2019 04:21 AM   |  A+A-


Congress MLA Umesh Jadhav likely to resign, says his brother Ramachandra Jadhav

ಉಮೇಶ್ ಜಾಧವ್

Posted By : LSB LSB
Source : UNI
ಕಲಬುರಗಿ: ಕಾಂಗ್ರೆಸ್‌ ಬಂಡಾಯ ಶಾಸಕ ಡಾ. ಉಮೇಶ್‌ ಜಾಧವ್ ಅವರು ಒಂದೆರಡು ದಿನದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಬಿಜೆಪಿ ಟಿಕೆಟ್‌ನಿಂದ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ಈ ಸಂಬಂಧ ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಡಾ. ಉಮೇಶ್‌ ಜಾಧವ್ ಅವರ ಸಹೋದರ ರಾಮಚಂದ್ರ ಜಾಧವ್ ಅವರು, ಉಮೇಶ್‌ ಜಾಧವ್ ಅವರು ಇಂದು ಇಲ್ಲವೇ ನಾಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದರು.

ಸದ್ಯ ಜಾಧವ್ ಅವರು ಬೆಂಗಳೂರಿನಲ್ಲಿ ಕಾನೂನು ತಜ್ಞರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಉಮೇಶ್‌ ಜಾಧವ್ ನಿರ್ಧರಿಸಿದ್ದು, ಕಾಂಗ್ರೆಸ್‌ ಪಕ್ಷಕ್ಕೆ ವಾಪಸ್‌ ಹೋಗದಿರಲು ಸಹ ತೀರ್ಮಾನಿಸಿದ್ದಾರೆ ಎಂದು ಹೇಳಿದರು.

ಕಲಬುರಗಿ ಪ್ರಾಂತ್ಯದಲ್ಲಿ ಹಿರಿಯ ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಪುತ್ರ ಪ್ರಿಯಾಂಕ್‌ ಖರ್ಗೆ ಅವರು ನಡೆಸುತ್ತಿರುವ ರಾಜಕೀಯದಿಂದ ಡಾ.ಜಾಧವ್ ಬೇಸರಗೊಂಡಿದ್ದಾರೆ. ಈ ಹಿನ್ನೆಲೆಯಲ್ಲೆ ಕಾಂಗ್ರೆಸ್‌ ಪಕ್ಷವನ್ನು ತ್ಯಜಿಸಿ, ಬಿಜೆಪಿ ಸೇರುವ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ರಾಮಚಂದ್ರ ಜಾಧವ್ ತಿಳಿಸಿದ್ದಾರೆ.
Stay up to date on all the latest ರಾಜಕೀಯ news with The Kannadaprabha App. Download now
facebook twitter whatsapp