ನೀರಿನ ಹಗರಣ ತನಿಖೆಗೆ ವಿಧಾನ ಪರಿಷತ್ ನಲ್ಲಿ ಬಿಜೆಪಿ ಒತ್ತಾಯ

ರಾಜ್ಯಾದ್ಯಂತ ಸ್ಥಾಪಿಸಿರುವ ಕುಡಿಯುವ ನೀರು ಶುದ್ಧೀಕರಣ ಘಟಕದ ಸ್ಥಾಪನೆ ಮತ್ತು ನಿರ್ವಹಣೆಯಲ್ಲಿ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯಾದ್ಯಂತ ಸ್ಥಾಪಿಸಿರುವ ಕುಡಿಯುವ ನೀರು ಶುದ್ಧೀಕರಣ ಘಟಕದ ಸ್ಥಾಪನೆ ಮತ್ತು ನಿರ್ವಹಣೆಯಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ತನಿಖೆ ನಡೆಸಲು ಸದನ ಸಮಿತಿ ರಚಿಸಬೇಕೆಂದು ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯರು ಒತ್ತಾಯಿಸಿದ್ದಾರೆ.

ಬೇಸಿಗೆಯ ಮುನ್ನ ನೀರಿನ ಶುದ್ದೀಕರಣ ಘಟಕವನ್ನು ದುರಸ್ತಿ ಮಾಡದಿದ್ದರೆ ಜನರಿಗೆ ಕುಡಿಯುವ ನೀರಿಗೆ ತೊಂದರೆಯಾಗಬಹುದು ಎಂದು ನಿನ್ನೆ ವಿಧಾನ ಪರಿಷತ್ ಕಲಾಪದಲ್ಲಿ ಬಿಜೆಪಿ ಸದಸ್ಯರು ಆಗ್ರಹಿಸಿದರು.

ಬಿಜೆಪಿ ಸದಸ್ಯ ರಘುನಾಥ ಮಲ್ಕಾಪುರೆ ವಿಧಾನಪರಿಷತ್ ಕಲಾಪದಲ್ಲಿ ಈ ವಿಷಯ ಪ್ರಸ್ತಾಪಿಸಿ, ಶುದ್ಧ ಕುಡಿಯುವ ನೀರು ಘಟಕಕ್ಕೆ ಬಿಡುಗಡೆಯಾದ ಹಣವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ದುರುಪಯೋಗಪಡಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರ ಕರ್ನಾಟಕ ಪಾರದರ್ಶಕ ಸಾರ್ವಜನಿಕ ಸಂಗ್ರಹ ಕಾಯ್ದೆಯನ್ನು ಉಲ್ಲಂಘಿಸಿ ನೀರಿನ ಶುದ್ಧೀಕರಣ ಸ್ಥಾಪನೆಗೆ ಕರ್ನಾಟಕ ಗ್ರಾಮೀಣ ಮೂಲಭೂತಸೌಕರ್ಯ ಅಭಿವೃದ್ಧಿ ಲಿಮಿಟೆಡ್ (ಕೆಆರ್ ಐಡಿಎಲ್ )ಗೆ ನೀಡಿತ್ತು. ಆದರೆ ಅದು ಕೆಲಸ ಮಾಡದೆ ಜನರಿಗೆ ಶುದ್ಧ ಕುಡಿಯುವ ನೀರು ಸಿಗದಂತೆ ಮಾಡಿದೆ ಎಂದು ಆರೋಪಿಸಿದರು.

ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ರಾಜ್ಯದಲ್ಲಿ ಶೇಕಡಾ 50ಕ್ಕೂ ಹೆಚ್ಚು ನೀರಿನ ಘಟಕಗಳು ಕೆಲಸ ಮಾಡುತ್ತಿಲ್ಲ, ಕೆಟ್ಟು ಹೋಗಿವೆ. ಒಂದು ಕಡೆಯಲ್ಲಿ ಘಟಕ ಸ್ಥಾಪನೆಗೆ 6 ಲಕ್ಷ ರೂಪಾಯಿ ವೆಚ್ಚವಾದರೆ ಇನ್ನೊಂದು ಕಡೆಯಲ್ಲಿ 10 ಲಕ್ಷ ರೂಪಾಯಿ, 15 ಲಕ್ಷ ರೂಪಾಯಿ ಅಥವಾ 17 ಲಕ್ಷ ರೂಪಾಯಿ ವೆಚ್ಚವಾಗಿದೆ. ಒಂದೇ ಸಾಮರ್ಥ್ಯದ ಘಟಕದ ಸ್ಥಾಪನೆ ವೆಚ್ಚದಲ್ಲಿ ವ್ಯತ್ಯಾಸವಾಗಿರುವುದೇಕೆ ಎಂದು ಪ್ರಶ್ನಿಸಿದರು.

ಬಿಜೆಪಿಯಿಂದ ಪ್ರತಿಭಟನೆ ಆರಂಭವಾದಾಗ ನೀರಿನ ಶುದ್ಧೀಕರಣ ಘಟಕ ಸ್ಥಾಪನೆಯ ಬೆಲೆ 17 ಲಕ್ಷದಿಂದ 10 ಲಕ್ಷದವರೆಗೆ ಕಡಿಮೆಯಾಯಿತು, ಸರ್ಕಾರ ಈ ಬಗ್ಗೆ ಏಕೆ ಮೌನವಹಿಸಿದೆ ಎಂದು  ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಕೃಷ್ಣ ಭೈರೇಗೌಡ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 18,552 ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಸರ್ಕಾರ ಅನುಮೋದನೆ ನೀಡಿದ್ದು ಅವುಗಳಲ್ಲಿ 16,166 ಘಟಕಗಳನ್ನು ಸ್ಥಾಪಿಸಲಾಗಿದೆ. ಸುಮಾರು 2 ಸಾವಿರ ಘಟಕಗಳು ಸ್ಥಾಪನೆಯ ಹಂತದಲ್ಲಿದೆ ಎಂದು ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com