ಲೋಕಸಮರಕ್ಕೆ ಇನ್ನೂ ಮೂವರು ಕಾರ್ಯಕಾರಿ ಅಧ್ಯಕ್ಷರ ನೇಮಕಕ್ಕೆ ಮುಂದಾದ ಕಾಂಗ್ರೆಸ್

ಲೋಕಸಭೆ ಚುನಾವಣೆಗಿಂತ ಮುಂಚಿತವಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ರಾಜ್ಯಾದ್ಯಂತ ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ಹೆಚ್ಚುವರಿಯಾಗಿ ಮೂವರು ಕಾರ್ಯಕಾರಿ ಅಧ್ಯಕ್ಷರನ್ನು....
ಲೋಕಸಮರಕ್ಕೆ ಇನ್ನೂ ಮೂವರು ಕಾರ್ಯಕಾರಿ ಅಧ್ಯಕ್ಷರ ನೇಮಕಕ್ಕೆ ಮುಂದಾದ ಕಾಂಗ್ರೆಸ್
ಲೋಕಸಮರಕ್ಕೆ ಇನ್ನೂ ಮೂವರು ಕಾರ್ಯಕಾರಿ ಅಧ್ಯಕ್ಷರ ನೇಮಕಕ್ಕೆ ಮುಂದಾದ ಕಾಂಗ್ರೆಸ್
ಬೆಂಗಳೂರು: ಲೋಕಸಭೆ ಚುನಾವಣೆಗಿಂತ ಮುಂಚಿತವಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ರಾಜ್ಯಾದ್ಯಂತ ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ಹೆಚ್ಚುವರಿಯಾಗಿ ಮೂವರು ಕಾರ್ಯಕಾರಿ ಅಧ್ಯಕ್ಷರನ್ನುನೇಮಿಸಲು ಮುಂದಾಗಿದೆ. ಓರ್ವ ಒಕ್ಕಲಿಗ, ಅಲೊಅಸಂಖ್ಯಾ ಹಾಗೂ ಇನ್ನೋರ್ವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳನ್ನು ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುವುದು ಎಂದು ಮೂಲಗಳು ಹೇಳಿದೆ. . ಹಿರಿಯ ನಾಯಕ ಬಿ. ಎಲ್. ಶಂಕರ್, ಮಾಜಿ ಸಚಿವರಾದ ಎಚ್. ಆಂಜನೇಯ ಮತ್ತು ತನ್ವೀರ್ ಸೇಟ್ ಹೆಸರುಗಳು ಈ ಹುದ್ದೆಗೆ ಕೇಳಿ ಬರುತ್ತಿದೆ. ಸಧ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬೆಂಗಳೂರು ಶಾಸಕರಾಗಿದ್ದರೆ ಉತ್ತರ ಕರ್ನಾಟಕ ಭಾಗಕ್ಕೆ ಬೀದರ್ ಶಾಸಕ ಈಶ್ವರ್ ಖಂಡ್ರೆ ಕಾರ್ಯಕಾರಿ ಅಧ್ಯಕ್ಷರಾಗಿದ್ದಾರೆ.
ಕೆಪಿಸಿಸಿ ಕಾರ್ಯಕಾರಿಗಳ ನೇಮಕಾತಿ ವಿಚಾರವನ್ನು ಇತ್ತೀಚೆಗೆ ನಡೆದ ಸಭೆಯಲ್ಲಿ ಚರ್ಚಿಸಲಾಗಿದ್ದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಸೇರಿದಂತೆ ಹಿರಿಯ ಮುಖಂಡರು  ಈ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಪಕ್ಷದ ಉನ್ನತ ನಾಯಕರಿಗೆ ರಾಜ್ಯದ ಈ ಪ್ರಸ್ತಾಪವನ್ನು ಕಳುಹಿಸಲು ಕೇಳಲಾಗಿದೆ. "ಚರ್ಚೆಯಾಗಿರುವುದು ನಿಜ, ಇನ್ನೂ ಅಂತಿಮ ನಿರ್ಧಾರಕ್ಕೆ ಬಂದಿಲ್ಲ" ಕಾಂಗ್ರೆಸ್ ನ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.
2018 ರ ವಿಧಾನಸಭಾ ಚುನಾವಣೆಯಲ್ಲಿ ಜಿ ಪರಮೇಶ್ವರ ಕೆಪಿಸಿಸಿ ಅಧ್ಯಕ್ಷರಾಗಿದ್ದ ವೇಳೆ ರಾಜ್ಯ ಘಟಕವು ಎರಡು ಕಾರ್ಯಕಾರಿ ಅಧ್ಯಕ್ಷರನ್ನು ಹೊಂದಿತ್ತು. ಉತ್ತರ ಕರ್ನಾಟಕದ ಎಸ್. ಆರ್. ಪಾಟೀಲ್ ಮತ್ತು ದಕ್ಷಿಣ ಕರ್ನಾಟಕದ ದಿನೇಶ್ ಗುಂಡೂರಾವ್ ಅವರು ಕಾರ್ಯಕಾರಿ ಅಧ್ಯಕ್ಷರಾಗಿದ್ದರು. ದಿನೇಶ್ ಗುಂಡೂರಾವ್  ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ನೇಮಿಸಿದಾಗ, ಪಕ್ಷವು ಆರಂಭದಲ್ಲಿ ಎರಡು ಕಾರ್ಯಕಾರಿ ಅಧ್ಯಕ್ಷರಾಗಿ ಖಂಡ್ರೆ ಹಾಗೂ ಶಂಕರ್ ಅವರನ್ನು ನೇಮಿಸಲು ತೀರ್ಮಾನಿಸಿದೆ. ಆದರೆ ಸಮಯಕ್ಕನುಗುಣವಾಗಿ ಇದು ನಡೆಇದ್ಲ್ಲ ಎಂದು ಹಿರಿಯ ನಾಯಕರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com