ಶಿವಮೊಗ್ಗ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ ಜೆಡಿಎಸ್: ಮತ್ತೆ ಮಧು ಬಂಗಾರಪ್ಪ 'ಹರಕೆಯ ಕುರಿ'?

ಲೋಕಸಭೆ ಚುನಾವಣೆಗೆ ಜೆಡಿಎಸ್‌ ತನ್ನ ಮೊದಲ ಅಭ್ಯರ್ಥಿಯನ್ನು ಪ್ರಕಟಿಸಿದೆ. ಉಪಚುನಾವಣೆಯಲ್ಲಿ ಸೋತಿದ್ದ ಮಧು ಬಂಗಾರಪ್ಪ ಅವರು ಮತ್ತೊಮ್ಮೆ ...
ಮಧು ಬಂಗಾರಪ್ಪ
ಮಧು ಬಂಗಾರಪ್ಪ
ಬೆಂಗಳೂರು: ಲೋಕಸಭೆ ಚುನಾವಣೆಗೆ ಜೆಡಿಎಸ್‌ ತನ್ನ ಮೊದಲ ಅಭ್ಯರ್ಥಿಯನ್ನು ಪ್ರಕಟಿಸಿದೆ. ಉಪಚುನಾವಣೆಯಲ್ಲಿ ಸೋತಿದ್ದ ಮಧು ಬಂಗಾರಪ್ಪ ಅವರು ಮತ್ತೊಮ್ಮೆ ಶಿವಮೊಗ್ಗದಿಂದ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. 
ಶಿವಮೊಗ್ಗ ಕ್ಷೇತ್ರಕ್ಕೆ ಮಧು ಬಂಗಾರಪ್ಪ ಅವರೇ ಜೆಡಿಎಸ್‌ ಅಭ್ಯರ್ಥಿ ಎಂದು  ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಘೋಷಿಸಿದ್ದಾರೆ. ನಿನ್ನೆ ಸದಾಶಿವನಗರದಲ್ಲಿ ಮಧು ಬಂಗಾರಪ್ಪ ಅವರ ಮನೆಗೆ ತೆರಳಿ ಚರ್ಚಿಸಿದ್ದರು. ಚರ್ಚೆಯ ನಂತರ ಮಾತನಾಡಿದ ದೇವೇಗೌಡ, ಶಿವಮೊಗ್ಗದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಕೂಡ ಸಮ್ಮತಿಸಿದೆ ಎಂದು ಹೇಳಿದೆ.
ಉಪಚುನಾವಣೆಯಲ್ಲಿ ಮಧು ಬಂಗಾರಪ್ಪ ಅವರ ಮೇಲೆ ಒತ್ತಡ ತಂದು ಚುನಾವಣೆಗೆ ನಿಲ್ಲಿಸಿದ್ದೆವು. ಅವರಿಗೆ ಹೆಚ್ಚಿನ ಸಮಯ ಸಹ ಇರಲಿಲ್ಲ, ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ನಾವು ಎಲ್ಲರೂ ಸೇರಿ ಪ್ರಯತ್ನ ಪಟ್ಟೆವು ಆದರೆ ಕಡಿಮೆ ಅಂತರದಲ್ಲಿ ಮಧು ಬಂಗಾರಪ್ಪ ಸೋತರು, ಸೋಲಿಗೆ ಕಾರಣವಾದ ಅಂಶಗಳ ಬಗ್ಗೆ ಪರಾಮರ್ಶೆ ನಡೆಸಲಾಗಿದೆ. ಈ ಬಾರಿ ಹಾಗೆ ಆಗುವುದಿಲ್ಲ ಮಧು ಅವರು ಗೆಲ್ಲುತ್ತಾರೆ ಎಂಬ ಭರವಸೆ ವ್ಯಕ್ತಪಡಿಸಿದರು. 
ಕಾಂಗ್ರೆಸ್‌ಗೆ ಅಭ್ಯರ್ಥಿಯ ಕೊರತೆ ಮೈತ್ರಿ ಪಕ್ಷಗಳು ಸೀಟು ಹಂಚಿಕೆ ಬಗ್ಗೆ ಪೂರ್ಣವಾಗಿ ಮಾತುಕತೆ ಆಗುವ ಮೊದಲೇ ದೇವೇಗೌಡ ಅವರು ಅಭ್ಯರ್ಥಿಯನ್ನು ಘೋಷಿಸಿದ್ದಾರೆ. ಕಾಂಗ್ರೆಸ್‌ಗೆ ಶಿವಮೊಗ್ಗದಲ್ಲಿ ಗಟ್ಟಿ ಅಭ್ಯರ್ಥಿ ಕೊರತೆ ಇರುವ ಲಾಭವನ್ನು ಜೆಡಿಎಸ್ ಪಡೆದು ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿದೆ
ಶಿವಮೊಗ್ಗ ಲೋ ಕಸಭೆ ಕ್ಷೇತ್ರ ಕಾಂಗ್ರೆಸ್‌ ಬೆಂಬಲದೊಂದಿಗೆ ಉಪಚುನಾವಣೆಯಲ್ಲಿ ಕಣಕ್ಕೆ ಇಳಿದಿದ್ದ ಮಧು ಬಂಗಾರಪ್ಪ ಬಿಜೆಪಿ ಭದ್ರಕೋಟೆ ಎನಿಸಿಕೊಂಡಿರುವ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ರಾಘವೇಂದ್ರ ಅವರಿಗೆ ಪೈಪೋಟಿ ನೀಡಿದ್ದರು. ಆದರೆ ಅಂತಿಮವಾಗಿ ಸುಮಾರು 30,000 ಮತಗಳ ಅಂತರದಿಂದಷ್ಟೆ ಸೋಲನುಭವಿಸಿದ್ದರು..

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com