ಸೈನಿಕರ ವಿಷಯವನ್ನು ಚುನಾವಣಾ ರಾಜಕೀಯಕ್ಕೆ ಬಳಸಿಕೊಳ್ಳುವ ಪ್ರಶ್ನೆಯೇ ಇಲ್ಲ: ಬಿ.ಎಸ್ ಯಡಿಯೂರಪ್ಪ

ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯರು ನಡೆಸಿದ ದಾಳಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 22 ಕ್ಷೇತ್ರಗಳನ್ನು ಗೆಲ್ಲಲು ಸಹಾಯ ..
ಯಡಿಯೂರಪ್ಪ
ಯಡಿಯೂರಪ್ಪ
ಯಾದಗಿರಿ:  ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯರು ನಡೆಸಿದ ದಾಳಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 22 ಕ್ಷೇತ್ರಗಳನ್ನು ಗೆಲ್ಲಲು ಸಹಾಯ ಮಾಡುತ್ತದೆ ಎಂಬ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೆ ಮಾಜಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. 
ಸೈನಿಕರ ವಿಚಾರವನ್ನು ಚುನಾವಣೆಗೆ ಬಳಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ವಿಗ್ ಕಮಾಂಡರ್ ಅಭಿನಂದನ್ ಪಾಕಿಸ್ತಾನ ವಶದಲ್ಲಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಕಾನೂನಿನಂತೆ ಅಭಿನಂದನ್‍ರನ್ನು ದೇಶಕ್ಕೆ ವಾಪಸ್ಸು ಕರೆತರಬೇಕು. ಸೆರೆಸಿಕ್ಕ ವ್ಯಕ್ತಿ ಮೇಲೆ ಹಲ್ಲೆ ನಡೆಸುವುದು ಕಾನೂನಿನಲ್ಲಿ ಅವಕಾಶವಿಲ್ಲ. ಭಾರತ ಅವರನ್ನು ವಾಪಸ್ ಕಳುಹಿಸಬೇಕು ಎಂದು ಕೇಳಿದೆ. ಹೀಗಾಗಿ ಪಾಕಿಸ್ತಾನ ಮತ್ತೊಂದು ಸಾಹಸಕ್ಕೆ ಪ್ರಯತ್ನಿಸುವುದಿಲ್ಲ. ಅಭಿನಂದನ್ ಅವರನ್ನು ವಾಪಸ್ ಕಳಿಸುವ ವಿಶ್ವಾಸವಿದೆ. ಸಿಎಂ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರಕ್ಕೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ. 
ಸುಷ್ಮಾ ಸ್ವರಾಜ್ ಸರ್ವ ಪಕ್ಷದ ಸಭೆ ಕರೆದು ಎಲ್ಲಿ ಏನು ನಡೆದಿದೆ ಎಂದು ತಿಳಿಸಿದ್ದಾರೆ. ರಾಜನಾಥ್ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿ ಎಲ್ಲರನ್ನು ಕರೆದು ಗಡಿಯಲ್ಲಿರುವ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಹೀಗಾಗಿ ಈ ವಿಷಯದಲ್ಲಿ ರಾಜಕೀಯ ಲಾಭ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ದೇಶದ 140 ಕೋಟಿ ಜನರು ಅಭಿನಂದನೆ ಸಲ್ಲಿಸುವ ಕಾರ್ಯ ಭಾರತೀಯ ವಾಯು ಸೇನೆ ಮಾಡಿದೆ ಎಂದು ಯಡಿಯೂರಪ್ಪ ಸ್ಪಷ್ಟನೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com