ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ನಟ ಪ್ರಕಾಶ್ ರೈ ಹೇಳಿದ್ದಾರೆ.
ಜನವರಿ 1 ರಂದು ಪಕ್ಷೇತರ ಅಭ್ಯರ್ಥಿಯಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಪ್ರಕಾಶ್ ರೈ ಟ್ವೀಟ್ ಮಾಡಿದ್ದರು. ಆದರೆ, ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಬಗ್ಗೆ ಸುಳಿವು ಬಿಟ್ಟು ಕೊಟ್ಟಿರಲಿಲ್ಲ.
Advertisement