ನಿಗಮ-ಮಂಡಳಿ ಸಮಸ್ಯೆ ಇರುವುದು ನಿಜ: ಜೆಡಿಎಸ್ ವರಿಷ್ಠ ದೇವೇಗೌಡ

ರಾಜ್ಯದ ಆಡಳಿತಾರೂಢ ಮೈತ್ರಿ ಪಕ್ಷದಲ್ಲಿ ನಿಗಮ-ಮಂಡಳಿ ವಿಚಾರಕ್ಕೆ ಸಂಬಂಧಪಟ್ಟಂತೆ ಕೆಲವು ಸಮಸ್ಯೆಗಳಿದ್ದು, ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ರೀತಿಯಿಂದಲೂ ಧಕ್ಕೆಯಾಗದಂತೆ ಸಮಸ್ಯೆಯನ್ನು ಬಗೆಹರಿಸಲಾಗುವುದು...
ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ
ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ
ಬೆಂಗಳೂರು: ರಾಜ್ಯದ ಆಡಳಿತಾರೂಢ ಮೈತ್ರಿ ಪಕ್ಷದಲ್ಲಿ ನಿಗಮ-ಮಂಡಳಿ ವಿಚಾರಕ್ಕೆ ಸಂಬಂಧಪಟ್ಟಂತೆ ಕೆಲವು ಸಮಸ್ಯೆಗಳಿದ್ದು, ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ರೀತಿಯಿಂದಲೂ ಧಕ್ಕೆಯಾಗದಂತೆ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಶನಿವಾರ ಸ್ಪಷ್ಟಪಡಿಸಿದ್ದಾರೆ. 
ಇದರಿಂದಾಗಿ ಸಮಸ್ಯೆ ಇರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಳಿಕ ದೇವೇಗೌಡರೂ ಒಪ್ಪಿಕೊಂಡಂತಾಗಿದೆ. 
ಪಕ್ಷದ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ನಿಗಮ-ಮಂಡಳಿ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈತ್ರಿ ಪಕ್ಷದಲ್ಲಿ ಅಸಮಾಧಾನವಿದೆ. ಆದರೆ, ಇದರಿಂದ ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಹೇಳಿದ್ದಾರೆ. 
ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರು, ಜೆಡಿಎಸ್'ಗೆ 2-3 ನಿಗಮಗಳನ್ನು ಹೆಚ್ಚಿಗೆ ಬಿಟ್ಟುಕೊಡುವ ಬಗ್ಗೆ ಆಶ್ವಾಸನೆ ನೀಡಿದ್ದಾರೆ. ಹೀಗಾಗಿ ಉಭಯ ಪಕ್ಷಗಳ ನಾಯಕರು ಕುಳಿತು ಚರ್ಚಿಸಿ ಒಮ್ಮತದ ನಿರ್ಣಯ ಕೈಗೊಂಡು ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com