ಜೆಡಿಎಸ್ ಮಾತಿಗೆ ಬೆಲೆ ನೀಡದಿದ್ದರೆ ನಿಮ್ಮ ದಾರಿ ನಿಮಗೆ, ನಮ್ಮ ದಾರಿ ನಮಗೆ: ಎಚ್.ಡಿ ರೇವಣ್ಣ

ನಿಗಮ-ಮಂಡಳಿ ನೇಮಕಾತಿ ಸಂಬಂಧ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಜೆಡಿಎಸ್ -ಕಾಂಗ್ರೆಸ್ ನಡುವಿನ ಸಂಘರ್ಷ ತಾರಕಕ್ಕೇರಿದೆ, ...
ಎಚ್.ಡಿ ರೇವಣ್ಣ
ಎಚ್.ಡಿ ರೇವಣ್ಣ
ಬೆಂಗಳೂರು: ನಿಗಮ-ಮಂಡಳಿ ನೇಮಕಾತಿ ಸಂಬಂಧ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಜೆಡಿಎಸ್ -ಕಾಂಗ್ರೆಸ್ ನಡುವಿನ ಸಂಘರ್ಷ ತಾರಕಕ್ಕೇರಿದೆ, 
ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಜೆಡಿಎಸ್‌ ಮಾತಿಗೆ ಹೆಚ್ಚಿನ ಬೆಲೆ ಸಿಗಬೇಕು. ಇಲ್ಲದಿದ್ದರೆ ನಮ್ಮ ದಾರಿ ನಮಗೆ, ನಿಮ್ಮ ದಾರಿ ನಿಮಗೆ'' ಎಂದು  ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಖಡಕ್‌ ಆಗಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ರೇವಣ್ಣ, ನಿಗಮ ಮಂಡಳಿ ನೇಮಕ ಮಾಡುವ ವಿಚಾರದಲ್ಲಿ ನಮ್ಮ ಜಿಲ್ಲೆಯ ಬಗ್ಗೆ  ತೀರ್ಮಾನ ತೆಗೆದುಕೊಳ್ಳುವಾಗ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು, ಮುಖ್ಯಮಂತ್ರಿ ಕುಮಾರಸ್ವಾಮಿ ನಮ್ಮ ಅಭಿಪ್ರಾಯ ಕೇಳಬೇಕು. ಹಾಸನ ಜಿಲ್ಲೆಯಲ್ಲಿ ಜೆಡಿಎಸ್‌ನಿಂದ ಆರು ಜನ ಶಾಸಕರಿದ್ದೇವೆ. ನಮ್ಮ ಜಿಲ್ಲೆಯಲ್ಲಿ ನಮ್ಮ ಮಾತಿಗೆ ಬೆಲೆ ಇಲ್ಲದಿದ್ದರೆ ಹೇಗೆ ? ಬೇರೆ ಜಿಲ್ಲೆಯ ವಿಷಯದಲ್ಲಿ ನಾವು ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ'' ಎಂದರು.
ಕಾಂಗ್ರೆಸ್ ಸೂಚಿಸಿದ್ದ 19 ಶಾಸಕರ ಪೈಕಿ ಐವರ ಹೆಸರು ಕೈಬಿಟ್ಟು 14 ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ ಆದೇಶ ಹೊರಡಿಸಿದ್ದರು, 
ನಿಗಮ ಮಂಡಳಿಗೆ ಕಾಂಗ್ರೆಸ್ ಶಾಸಕರನ್ನು ನೇಮಕ ಮಾಡಿದ ನಂತರ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ನೇರವಾಗಿ ಕುಮಾರ ಸ್ವಾಮಿ ಅವರ ಬಳಿ ನೀಡಿದ್ದರು. 
ಎಲ್ಲಾ ಪ್ರಮುಖ ಹುದ್ದೆಗಳನ್ನು ಜೆಡಿಎಸ್ ಕಿತ್ತುಕೊಂಡಿದೆ ಎಂದು ಶಾಸಕ ಕೆ, ಸುಧಾಕರ್ ಆರೋಪಿಸಿದ್ದರು,  ಇದರ ಬೆನ್ನಲ್ಲೇ ಆಯಕಟ್ಟಿನ ಹುದ್ದೆಗಳಿಗೆ ತಮಗೆ ಬೇಕಾದವರನ್ನು ನೇಮಿಸಿಕೊಂಡಿರುವುದಕ್ಕೆ ಸಿಎಂ ಕುಮಾರ ಸ್ವಾಮಿ ವಿರುದ್ಧ ಕಾಂಗ್ರೆಸ್ ಮುಖಂಡರು ಆಕ್ರೋಶಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com