ಸಿಎಂ ಕುಮಾರಸ್ವಾಮಿ ಕ್ಲರ್ಕ್ ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ!

ಕರ್ನಾಟಕ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಕ್ಲರ್ಕ್ ರೀತಿ ನಡೆಸಿಕೊಳ್ಳುತ್ತಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಕುರಿತಂತೆ ರಾಜ್ಯ ಕಾಂಗ್ರೆಸಿಗರು ಮೋದಿ ವಿರುದ್ಧ...
ನರೇಂದ್ರ ಮೋದಿ-ಸಿದ್ದರಾಮಯ್ಯ-ಮಲ್ಲಿಕಾರ್ಜುನ್ ಖರ್ಗೆ
ನರೇಂದ್ರ ಮೋದಿ-ಸಿದ್ದರಾಮಯ್ಯ-ಮಲ್ಲಿಕಾರ್ಜುನ್ ಖರ್ಗೆ
ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಕ್ಲರ್ಕ್ ರೀತಿ ನಡೆಸಿಕೊಳ್ಳುತ್ತಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಕುರಿತಂತೆ ರಾಜ್ಯ ಕಾಂಗ್ರೆಸಿಗರು ಮೋದಿ ವಿರುದ್ಧ ತಿರುಗಿಬಿದ್ದಿದ್ದಾರೆ. 
ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಇದು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಕ್ಕೆ ಸಂಬಂಧಪಟ್ಟ ವಿಚಾರ. ನಮ್ಮ ಉಸಾಬರಿ ಪ್ರಧಾನಿ ಮೋದಿಯವರಿಗೆ ಯಾಕೆ? ಅವರು ಯಾರು ಹೇಳೋದಕ್ಕೆ. ಸುಮ್ಮನೆ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಅವರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ ಅಂತಾ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. 
ಪ್ರಧಾನಿ ಮೋದಿಯವರ ಪಾರ್ಟಿಯಲ್ಲಿ ಯಾರೂ ಹೇಳೋರಿಲ್ಲ, ಕೇಳೋರಿಲ್ಲ, ಇಂತಹವರ ಸಲಹೆಗಳನ್ನು ನಾವು ತೆಗೆದುಕೊಳ್ತೀವಾ? ಕ್ಯಾಬಿನೆಟ್ ನಲ್ಲಿ ಅವರ ಪಕ್ಷದವರ ಮಾತನ್ನೇ ಅವರು ಕೇಳಲ್ಲ. ಸುಮ್ಮನೆ ಆರೋಪ ಮಾಡ್ದಾರೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. 
ಮುಖ್ಯಮಂತ್ರಿಗಳ ಬಗ್ಗೆ ಪ್ರಧಾನಿ ಮೋದಿ ಅವರು ಈ ರೀತಿ ಹಗುರವಾಗಿ ಮಾತನಾಡಬಾರದು. ಮುಖ್ಯಮಂತ್ರಿಗಳು ತಮ್ಮ ಕೆಲಸವನ್ನು ತಾವು ಮಾಡುತ್ತಿದ್ದಾರೆ. ಪ್ರಧಾನಿ ಯಾಕೆ ಪದೇ ಪದೇ ರಾಜ್ಯದ ಬಗ್ಗೆ ಮಾತನಾಡುತ್ತಾರೆ. ಅವರ ಹೇಳಿಕೆಯನ್ನು ನಾವು ಖಂಡಿಸುತ್ತೇವೆ ಎಂದು  ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ದಿನೇಶ್ ಗುಂಡುರಾವ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com