Source : The New Indian Express
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದಲ್ಲಿ ಬಿಸ್ಪಿ ಹಾಗೂ ಎಸ್ಪಿ ಮೈತ್ರಿಯಿಂದಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಮೇಲೆ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ.
ಸೀಟು ಹಂಚಿಕೆ ಸಂಬಂಧ ಕೆಲ ದಿನಗಳಲ್ಲಿ ಪಕ್ಷದ ನಾಯಕರು ಮಾತುಕತೆ ನಡೆಸಲಿದ್ದು, ಮೈತ್ರಿ ಪಕ್ಷ ಜೆಡಿಎಸ್ 12 ಸ್ಥಾನಗಳಿಗೆ ಬೇಡಿಕೆ ಇಡುತ್ತಿದೆ. 9 ಅಥವಾ 10 ಸ್ಥಾನಗಳಿಗೆ ಅಂತಿಮವಾಗುವ ಸಾಧ್ಯತೆ ಇದೆ.
ಆದಾಗ್ಯೂ, ಜೆಡಿಎಸ್ ದಕ್ಷಿಣ ಕರ್ನಾಟಕದಲ್ಲಿ ಹೆಚ್ಚಿನ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದು, ಜೆಡಿಎಸ್ ಪಟ್ಟು ಸಡಿಸುವ ಸಾಧ್ಯತೆ ತೀರಾ ಕಡಿಮೆ ಇದೆ. ಆದಾಗ್ಯೂ, ಉತ್ತರ ಪ್ರದೇಶದಲ್ಲಿ ಎಸ್ಪಿ, ಬಿಎಸ್ಪಿ ಮೈತ್ರಿಯಿಂದಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಮೇಲೆ ಜೆಡಿಎಸ್ ಹೆಚ್ಚಿನ ಒತ್ತಡ ಹಾಕುವ ಸಾಧ್ಯತೆ ತೀರಾ ಕಡಿಮೆ ಎಂದು ರಾಜಕೀಯ ವಿಶ್ಲೇಷಕ ಪ್ರೊಫೆಸರ್ ಸಂದೀಪ್ ಶಾಸ್ತ್ರಿ ಹೇಳುತ್ತಾರೆ.
ಕರ್ನಾಟಕದಲ್ಲಿನ ಮೈತ್ರಿಯಲ್ಲಿ ಕಾಂಗ್ರೆಸ್ ಪ್ರಬಲವಾದ ರಾಜಕೀಯ ಪಕ್ಷವಾಗಿದ್ದು, ಒಂದು ವೇಳೆ ಜೆಡಿಎಸ್ 12 ಸ್ಥಾನಗಳಿಗೆ ಬೇಡಿಕೆ ಇಟ್ಟರೂ ಅಂತಿಮವಾಗಿ ಏಳು ಅಥವಾ ಎಂಟು ಸ್ಥಾನಗಳಿಗೆ ಒಪ್ಪಿಕೊಳ್ಳುವ ಸಾಧ್ಯತೆ ಇದೆ. ಉತ್ತರ ಪ್ರದೇಶದಲ್ಲಿ ಎಸ್ಪಿ, ಬಿಎಸ್ಪಿ ಮೈತ್ರಿ ಮಾಡಿಕೊಂಡಿದ್ದರೂ ಕಾಂಗ್ರೆಸ್ ಗೆ ನಾಲ್ಕರಿಂದ ಐದು ಸ್ಥಾನಗಳನ್ನು ಬಿಟ್ಟುಕೊಟ್ಟಿರುವುದು ಅಶ್ಚರ್ಯವನ್ನುಂಟುಮಾಡಿದೆ ಎಂದು ರಾಜಕೀಯ ವಿಶ್ಲೇಷಕ ಪ್ರೋಫೆಸರ್ ಹರೀಶ್ ರಾಮಸ್ವಾಮಿ ಹೇಳುತ್ತಾರೆ.
ಬಿಎಸ್ಪಿ ಎಸ್ಪಿ, ಆತುರದ ನಿರ್ಧಾರ ಕೈಗೊಂಡಿವೆ. ಇತರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗುತ್ತದೆ ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
ಎಲ್ಲಾ ಸಮನ ಮನಸ್ಕ ಪಕ್ಷಗಳು ಬಿಡೆಪಿ ಹಾಗೂ ಆರ್ ಎಎಸ್ ಸರ್ವಾಧಿಕಾರಿ ವರ್ತನೆ ವಿರುದ್ಧ ಹೋರಾಡಬೇಕಿದೆ. ಮೋದಿ ಅವರ ಸುಳ್ಳನ್ನು ಒಪ್ಪದೇ ಇರುವವರ ವಿರುದ್ದ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಇಂದು ರಕ್ಷಣೆ ಇಲ್ಲದಂತಾಗಿದೆ. ಸಮಾನ ಮನಸ್ಕ ಪಕ್ಷಗಳು ಮೈತ್ರಿ ಮಾಡಿಕೊಳ್ಳುವುದು ಒಳ್ಳೆಯದು ಎಂದು ಖರ್ಗೆ ಹೇಳಿದ್ದಾರೆ