ಮಂಡ್ಯದಲ್ಲಿ ಎಚ್ ಡಿ ದೇವೇಗೌಡರ ಸ್ಪರ್ಧೆ: ಬೆಂಬಲಿಗರ ಸಭೆಯಲ್ಲಿ ನಿಖಿಲ್ ಹೇಳಿದ್ದೇನು?

ಮಂಡ್ಯದಿಂದ ಸುಮಲತಾ ಅಂಬರೀಷ್ ಅವರು ಸ್ಪರ್ಧಿಸುವ ವಿಚಾರ ವ್ಯಾಪಕವಾಗಿ ಕೇಳಿಬರುತ್ತಿರುವಂತೆಯೇ ಇತ್ತ ಜೆಡಿಎಸ್ ವತಿಯಿಂದಲೂ ಪ್ರಭಾವಿ ರಾಜಕಾಣಿಯೊಬ್ಬರು ಮಂಡ್ಯದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಮಂಡ್ಯದಿಂದ ಸುಮಲತಾ ಅಂಬರೀಷ್ ಅವರು ಸ್ಪರ್ಧಿಸುವ ವಿಚಾರ ವ್ಯಾಪಕವಾಗಿ ಕೇಳಿಬರುತ್ತಿರುವಂತೆಯೇ ಇತ್ತ ಜೆಡಿಎಸ್ ವತಿಯಿಂದಲೂ ಪ್ರಭಾವಿ ರಾಜಕಾಣಿಯೊಬ್ಬರು ಮಂಡ್ಯದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಪ್ರಸ್ತುತ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ನ ಎಲ್ ಆರ್ ಶಿವರಾಮೇ ಗೌಡ ಅವರು ಸಂಸದರಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇಲ್ಲಿ ಕಾಂಗ್ರೆಸ್ ಪಕ್ಷದಿಂದ ಸುಮಲತಾ ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ಸುಮಲತಾ ಅವರ ಸ್ಪರ್ಧೆ ಖಚಿತವಾಗಿಲ್ಲವಾದರೂ ಒಂದು ವೇಳೆ ಅವರು ಮಂಡ್ಯದಿಂದ ಸ್ಪರ್ಧಿಸಿದರೆ ಆಗ ಜೆಡಿಎಸ್ ಗೆಲುವ ಕಷ್ಟ ಸಾಧ್ಯವಾಗಲಿದೆ. ಇದೇ ಕಾರಣಕ್ಕೆ ಗೌಡರ ಕುಟುಂಬದಿಂದ ಒಬ್ಬರು ಈ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಹಿಂದೆ ಈ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆಯಾದರೂ, ಸ್ವತಃ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಹೆಸರೂ ಕೂಡ ಬಲವಾಗಿ ಕೇಳಿಬರುತ್ತಿದೆ. ಈ ಬಗ್ಗೆ ಸ್ವತಃ ನಿಖಿಲ್ ಕುಮಾರಸ್ವಾಮಿ ಅವರು ಇತ್ತೀಚೆಗೆ ಮಂಡ್ಯದ ಮದ್ದೂರು ತಾಲೂಕಿನ ಕೆಎಂದೊಡ್ಡಿಯಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಮಾತನಾಡಿ, ನನ್ನ ಸ್ಪರ್ಧೆ ಕುರಿತು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ. ಒಂದು ವೇಳೆ ಮಂಡ್ಯದಿಂದ ದೇವೇಗೌಡರು ಸ್ಪರ್ಧಿಸಿದರೆ, ಅವರ ಗೆಲುವು ಸಾಮಾನ್ಯವಾಗಿರಬಾರದು. ಅಭೂತಪೂರ್ವ ಗೆಲುವಾಗಿರಬೇಕು. ಇದಕ್ಕಾಗಿ ನಾನು ಕೂಡ ನಿಮ್ಮೊಂದಿಗೆ ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ.
ಆ ಮೂಲಕ ನಿಖಿಲ್ ಕುಮಾರಸ್ವಾಮಿ ಅವರು ದೇವೇಗೌಡರು ಮಂಡ್ಯದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳುವ ಮೂಲಕ ಹೊಸದೊಂದು ಚರ್ಚೆ ಹುಟ್ಟು ಹಾಕಿದ್ದಾರೆ. ಅಲ್ಲದೆ ನಿಖಿಲ್ ಅವರ ಹೇಳಿಕೆಯ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com