'ಆಪರೇಷನ್' ರಾಜಕೀಯ; ಮುಂಬೈನಲ್ಲಿ 'ಕೈ', ಗುರುಗ್ರಾಮದಲ್ಲಿ 'ಕಮಲ' ಶಾಸಕರ ರೆಸಾರ್ಟ್ ವಾಸ!

ಹಾಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಮತ್ತೆ ಆಪರೇಷನ್ ಕಮಲ ಭೀತಿ ಶುರುವಾಗಿದ್ದು, ಇದಕ್ಕೆ ಇಂಬು ನೀಡುವಂತೆ ಬಿಜೆಪಿಯ ಎಲ್ಲ ಶಾಸಕರೂ ಗುರುಗ್ರಾಮ ರೆಸಾರ್ಟ್ ನಲ್ಲಿ ತಂಗುವ ಮೂಲಕ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಹಾಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಮತ್ತೆ ಆಪರೇಷನ್ ಕಮಲ ಭೀತಿ ಶುರುವಾಗಿದ್ದು, ಇದಕ್ಕೆ ಇಂಬು ನೀಡುವಂತೆ ಬಿಜೆಪಿಯ ಎಲ್ಲ ಶಾಸಕರೂ ಗುರುಗ್ರಾಮ ರೆಸಾರ್ಟ್ ನಲ್ಲಿ ತಂಗುವ ಮೂಲಕ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದಾರೆ.
ಮಾಧ್ಯಮ ವರದಿಗಳ ಪ್ರಕಾರ ಹಾಲಿ ಮೈತ್ರಿ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರ ರಚನೆ ಉದ್ದೇಶದಿಂದ ಆಪರೇಷನ್ ಕಮಲಕ್ಕೆ ಚಾಲನೆ ನೀಡಲು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಇದೇ ಕಾರಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ತಮ್ಮ ಶಾಸಕರನ್ನು ದೆಹಲಿಯಿಂದ ಗುರುಗ್ರಾಮದ ರೆಸಾರ್ಟ್ ರವಾನೆ ಮಾಡಿದ್ದಾರೆ ಎನ್ನಲಾಗಿದೆ.
ದೆಹಲಿಯಲ್ಲಿ ಬಿಜೆಪಿ ಶಾಸಕರ ಜೊತೆ ಬೀಡು ಬಿಟ್ಟಿರುವ ಯಡಿಯೂರಪ್ಪ ಸುದ್ದಿಗಾರರ ಜತೆ ಮಾತನಾಡುತ್ತ, ಕಾಂಗ್ರೆಸ್, ಜೆಡಿಎಸ್ ಆಡಳಿತ ನಡೆಸಲು ಸಂಪೂರ್ಣವಾಗಿ ವಿಫಲವಾಗಿದೆ. ನಾವು ಆಪರೇಷನ್ ಕಮಲದ ಪ್ರಯತ್ನಕ್ಕೆ ಕೈ ಹಾಕಿಲ್ಲ ಎಂದು ಹೇಳಿದ್ದರು. ಆದರೆ ಇಂದು ಮಧ್ಯಾಹ್ನ ಕರ್ನಾಟಕಕ್ಕೆ ಆಗಮಿಸಬೇಕಿದ್ದ ಶಾಸಕರು ದಿಢೀರ್ ನಿರ್ಧಾರ ಬದಲಿಸಿ ಗುರುಗ್ರಾಮದ ರೆಸಾರ್ಟ್ ನಲ್ಲಿ ಬೀಡು ಬಿಟ್ಟಿರುವುದೇಕೆ ಎಂಬ ಪ್ರಶ್ನೆ ಕೂಡ ಉದ್ಭವವಾಗಿದೆ. 
ಎಲ್ಲ ಶಾಸಕರನ್ನು ರೆಸಾರ್ಟ್ ಗೆ ಶಿಫ್ಟ್ ಮಾಡುವಂತೆ ಅಮಿತ್ ಶಾ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಯಡಿಯೂರಪ್ಪ ಸಹಿತ 98 ಶಾಸಕರು ಗುರುಗ್ರಾಮಕ್ಕೆ ಬಸ್ಸಿನ ಮೂಲಕ ತೆರಳಲಿದ್ದಾರೆ. ಎರಡು ಬಸ್ಸುಗಳಲ್ಲಿ ಶಾಸಕರನ್ನು ಶಿಫ್ಟ್ ಮಾಡಲು ಸಿದ್ಧತೆ ನಡೆದಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ದೆಹಲಿಯಲ್ಲಿ ನಡೆದ ಸಭೆಯಲ್ಲಿ ಆಪರೇಷನ್ ಕಮಲದ ಬಗ್ಗೆ ಬಿಎಸ್ ಯಡಿಯೂರಪ್ಪ ಶಾಸಕರಿಗೆ ಮಾಹಿತಿ ನೀಡಿದ್ದು, 16 ಕೈ ಶಾಸಕರು ಹಾಗೂ ಇಬ್ಬರು ಪಕ್ಷೇತರರು ಬಿಜೆಪಿಗೆ ಬರಲಿದ್ದಾರೆ. ಎಲ್ಲರೂ ಕೂಡ ಒಟ್ಟಿಗೆ ಇರೋಣ ಯಾವುದಕ್ಕೂ ತಲೆ ಕೆಡಿಸಿಕೊಳ್ಳುವುದು ಬೇಡ ಎಂದಿದ್ದಾರೆ ಎಂದು ತಿಳಿದುಬಂದಿದೆ.
ಅಲ್ಲದೆ  ಡಿಕೆ ಶಿವಕುಮಾರ್ ಇಲ್ಲವೇ ಎಚ್‍ಡಿಕೆ ಯಾರೇ ಕರೆ ಮಾಡಿ ಅಮಿಷಗಳನ್ನ ಒಡ್ಡಿದ್ದರು ಅದನ್ನು ನಮ್ಮ ಗಮನಕ್ಕೆ ತನ್ನಿ. ಅವರು ಕಾಲ್ ಮಾಡಿದರೆ ಅದನ್ನು ರೆಕಾರ್ಡ್ ಮಾಡಿಕೊಳ್ಳಿ ಎಂದು ಬಿಜೆಪಿ ಶಾಸಕರಿಗೆ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಮಧ್ಯಾಹ್ನ ಯಡಿಯೂರಪ್ಪನವರು ಇಂದು ಸಂಜೆ ಬಿಜೆಪಿ ಶಾಸಕರು ರಾಜ್ಯಕ್ಕೆ ಮರಳಲಿದ್ದಾರೆ ಎಂದು ತಿಳಿಸಿದ್ದರು. ಆದರೆ ಸಂಜೆಯಾಗುತ್ತಿದ್ದಂತೆ ಪ್ಲಾನ್ ಬದಲಾಗಿದೆ.  ಬಿಜೆಪಿಯ ಈ ನಡೆ ರಾಜ್ಯದಲ್ಲಿ ಆಪರೇಷನ್ ಕಮಲ ಚಾಲ್ತಿಯಲ್ಲಿದೆ. ತಮ್ಮ ಪಕ್ಷದ ಶಾಸಕರನ್ನು ರಕ್ಷಿಸಿಕೊಳ್ಳಲು ಬಿಜೆಪಿ ಇಂತಹ ನಡೆ ಇರಿಸಿದೆ ಎಂಬ ಮಾತುಗಳೂ ಕೇಳಿ ಬರುತ್ತಿವೆ. ಅಲ್ಲದೆ ಪ್ರಸ್ತುತ ಬಿಜೆಪಿ ಶಾಸಕರು ತಂಗಿರುವ ರೆಸಾರ್ಟ್ ಗೆ ಹರ್ಯಾಣ ಪೊಲೀಸರು ಬಿಗಿ ಭದ್ರತೆ ನೀಡಿದ್ದು, ಬಿಜೆಪಿಯ ಬಹುತೇಕ ಶಾಸಕರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿವೆ ಎಂದು ತಿಳಿದುಬಂದಿದೆ.
ಮುಂಬೈನಲ್ಲಿ ಕೈ ಪಕ್ಷ ಮೂವರು ಶಾಸಕರು ಠಿಕಾಣಿ
ಇನ್ನು ಇತ್ತ ಮುಂಬೈನಲ್ಲೂ ಕಾಂಗ್ರೆಸ್ ಪಕ್ಷದ ಮೂರು ಅಥವಾ ಅದಕ್ಕಿಂತಲೂ ಹೆಚ್ಚು ಭಿನ್ನಮತೀಯ ಶಾಸಕರು ಬಿಜೆಪಿ ಪಕ್ಷದ ಮುಖಂಡರೊಂದಿಗೆ ಇದ್ದಾರೆ ಎಂದು ಹೇಳಲಾಗುತ್ತಿದೆ. ಅತೃಪ್ತ ಶಾಸಕರ ಸಂಖ್ಯೆಯಲ್ಲಿ ಮೂರು ಪಕ್ಷಗಳ ನಡುವೆ ಬೇರೆ ಬೇರೆ ಅಭಿಪ್ರಾಯ ಇದೆ. ಒಂದು ಕಡೆ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಸರಕಾರಕ್ಕೆ ಯಾವುದೆ ಭಂಗ ಇಲ್ಲ ಎಂದು  ಹೇಳಿಕೆ ನೀಡಿದ್ದರು. ಆದರೆ ಸಂಜೆಯಾಗುತ್ತಿದ್ದಂತೆ ಪರಿಸ್ಥಿತಿ ಬೇರೆ ಆಗಿದೆ. ಕಾಂಗ್ರೆಸ್ ಮತ್ತು ಡಿಕೆ ಶಿವಕುಮಾರ್ ಪ್ರಕಾರ ಮುಂಬೈನಲ್ಲಿ ಮೂವರು ಶಾಸಕರಿದ್ದಾರೆ. ಆದರೆ ಸಿಎಂ ಕುಮಾರಸ್ವಾಮಿ ಪ್ರಕಾರ 6 ಜನ ಮುಂಬೈನಲ್ಲಿದ್ದಾರೆ. ಇನ್ನು ಗುಪ್ತಚರ ದಳ ಹೇಳುವ ಪ್ರಕಾರ 11 ಶಾಸಕರು ಮುಂಬೈನಲ್ಲಿದ್ದಾರೆ. ಬಿಜೆಪಿ ವಲಯದ ಪ್ರಕಾರ 15 ರಿಂದ 23 ಜನ ಶಾಸಕರಿದ್ದಾರೆ ಎಂಬ ವರದಿಗಳು ಕೇಳಿಬರುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com