ಅಪೊಲೋ ಆಸ್ಪತ್ರೆಗೆ ಸಿಎಂ ಕುಮಾರಸ್ವಾಮಿ ಭೇಟಿ: ಆನಂದ್ ಸಿಂಗ್ ಆರೋಗ್ಯ ವಿಚಾರಣೆ

ಶನಿವಾರ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಶಾಸಕ ಆನಂದ್ ಸಿಂಗ್ ಆರೋಗ್ಯ ವಿಚಾರಿಸಿದರು. ...
ಆನಂದ್ ಸಿಂಗ್ ಆರೋಗ್ಯ ವಿಚಾರಿಸಿದ ಸಿಎಂ ಕುಮಾರಸ್ವಾಮಿ
ಆನಂದ್ ಸಿಂಗ್ ಆರೋಗ್ಯ ವಿಚಾರಿಸಿದ ಸಿಎಂ ಕುಮಾರಸ್ವಾಮಿ
ಬೆಂಗಳೂರು:  ಶನಿವಾರ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಶಾಸಕ ಆನಂದ್ ಸಿಂಗ್ ಆರೋಗ್ಯ ವಿಚಾರಿಸಿದರು. 
ಜನವರಿ 19 ರಂದು ರಾತ್ರಿ ರಾಮನಗರದ ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ಶಾಸಕ ಗಣೇಶ್ ಅವರು ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ಆನಂದ್ ಸಿಂಗ್ ಅವರ ಆರೋಗ್ಯ ವಿಚಾರಿಸಲು ಹಲವು ಸಲ ಭೇಟಿ ನಿಗದಿಯಾಗಿತ್ತು. ಆದರೆ, ಕಾರಣಾಂತರದಿಂದ ಆಸ್ಪತ್ರೆ ಭೇಟಿ ಕಾರ್ಯಕ್ರಮ ರದ್ದಾಗಿತ್ತು.
ಇಂದು ಆಸ್ಪತ್ರೆಗೆ ಭೇಟಿ ನೀಡಿದ್ದ ಸಿಎಂ, ಸುಮಾರು ಅರ್ಧ ಗಂಟೆ ಕಾಲ ಆನಂದ್ ಸಿಂಗ್ ಅವರೊಂದಿಗೆ ಮಾತನಾಡಿದ್ದಾರೆ. ಅವರ ಕುಟುಂಬದವರೊಂದಿಗೂ ಮಾತನಾಡಿದ್ದಾರೆ. ಸುಮಾರು 20 ನಿಮಿಷಗಳ ಕಾಲ ಆನಂದ್ ಸಿಂಗ್ ಜೊತೆ ಚರ್ಚೆ ನಡೆಸಿದ ಕುಮಾರಸ್ವಾಮಿ, ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com