ದೇಶಕ್ಕೆ ಮೋದಿ ಪಿಎಂ, ರಾಜ್ಯಕ್ಕೆ ಎಚ್ ಡಿಕೆ ಸಿಎಂ: ಇದನ್ನು ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ- ಜಿಟಿಡಿ

ದೇಶಕ್ಕೆ ನರೇಂದ್ರ ಮೋದಿ ಪ್ರಧಾನಿ ಹೇಗೋ ಹಾಗೆಯೇ ರಾಜ್ಯಕ್ಕೆ ಕುಮಾರಸ್ವಾಮಿ ಮುಖ್ಯಮಂತ್ರಿ, ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ ..
ಜಿ.ಟಿ ದೇವೇಗೌಡ
ಜಿ.ಟಿ ದೇವೇಗೌಡ
ಮೈಸೂರು: ದೇಶಕ್ಕೆ ನರೇಂದ್ರ ಮೋದಿ ಪ್ರಧಾನಿ ಹೇಗೋ ಹಾಗೆಯೇ ರಾಜ್ಯಕ್ಕೆ ಕುಮಾರಸ್ವಾಮಿ ಮುಖ್ಯಮಂತ್ರಿ, ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಜಿಟಿ ದೇವೇಗೌಡ ಇಂದು ಕೂಡ ಬಿಜೆಪಿ ಪರ ಬ್ಯಾಟಿಂಗ್ ಮಾಡಿದ್ದಾರೆ. ಸರ್ಕಾರ ರಚನೆಯಾದ ಪ್ರಾರಂಭದಲ್ಲಿ ಬಿಜೆಪಿ ಅವರು ಆಪರೇಶನ್ ಕಮಲ ಮಾಡುತ್ತಿದ್ದರು. ಆದರೆ ಕೇಂದ್ರದಲ್ಲಿ ಮೋದಿ ಅಧಿಕಾರ ಸ್ವೀಕರಿಸಿದ ಬಳಿಕ ಬಿಜೆಪಿಯವರು ಆಪರೇಶನ್ ಕಮಲ ಮಾಡುವುದನ್ನು ನಿಲ್ಲಿಸಿದ್ದಾರೆ. 
ನಾನು ಸೋಮವಾರ ನೀಡಿದ್ದ ಹೇಳಿಕೆಗೆ ಈಗಲೂ ಬದ್ಧ ಹಾಗೂ ಮುಂದೆಯೂ ಬದ್ಧನಾಗಿಯೇ ಇರುತ್ತೇನೆ. ನಾನು ಹೇಳಿದ್ದನ್ನು ತಪ್ಪಾಗಿ ಅರ್ಥೈಸಬೇಡಿ ಎಂದು ಸಚಿವ ಜಿ.ಟಿ ದೇವೇಗೌಡ ಮನವಿ ಮಾಡಿಕೊಂಡರು.
ಸರ್ಕಾರ ಸುಭದ್ರವಾಗಿದೆ. ಕರ್ನಾಟಕದಲ್ಲಿ ಸಿಎಂ 4 ವರ್ಷ ಮುಖ್ಯಮಂತ್ರಿಯಾಗಿ ಇರುತ್ತಾರೆ. ನರೇಂದ್ರ ಮೋದಿ ಕೇಂದ್ರದಲ್ಲಿ 5 ವರ್ಷ ಆಡಳಿತ ನಡೆಸುತ್ತಾರೆ. ಹಾಗೆಯೇ ನಮ್ಮಲ್ಲೂ ಕೂಡ ಯಾರು ಏನೇ ಮಾಡಿದರೂ ಸಿಎಂ ಕರ್ನಾಟಕದ ಮುಖ್ಯಮಂತ್ರಿ ಆಗಿರುತ್ತಾರೆ. 
ಮೋದಿ ಭಾರತದ ಪ್ರಧಾನಿ ಆಗಿರುತ್ತಾರೆ. ಜನ ರಾಷ್ಟ್ರಕ್ಕೆ ಹಾಗೂ ರಾಜ್ಯಕ್ಕೆ ಬೇರೆ ತೀರ್ಪು ಕೊಟ್ಟಿದ್ದಾರೆ. ಇದನ್ನು ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ನಗರ ಪ್ರದಕ್ಷಿಣೆ ವೇಳೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com