ಮುಯ್ಯಿಗೆ-ಮುಯ್ಯಿ, ಏಟಿಗೆ-ಎದಿರೇಟು: ಆಪರೇಷನ್ ಕಮಲಕ್ಕೆ 'ಕೈ-ತೆನೆ' ತಿರುಗೇಟು!

ಸಮ್ಮಿಶ್ರ ಸರ್ಕಾರದ ಕಾಂಗ್ರೆಸ್ ನ ಇಬ್ಬರು ಶಾಸಕರ ರಾಜಿನಾಮೆ ವಿಷಯ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ಮತ್ತಷ್ಟು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ...
ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ
ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಕಾಂಗ್ರೆಸ್ ನ  ಇಬ್ಬರು ಶಾಸಕರ ರಾಜಿನಾಮೆ ವಿಷಯ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ಮತ್ತಷ್ಟು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರಾಜಿನಾಮೆ ನೀಡುತ್ತಾರೆ ಎಂಬ ವದಂತಿಗಳು ಹಬ್ಬುತ್ತಿವೆ, ಹೀಗಾಗಿ ಸಮ್ಮಿಶ್ರ ಸರ್ಕಾರದ ಅಂಗ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಗಳು ಬಿಜೆಪಿ ಶಾಸಕರನ್ನು ಸೆಳೆಯಲು ಪ್ರತಿತಂತ್ರ ರೂಪಿಸುತ್ತಿವೆ.
ಇನ್ನೂ ಡ್ಯಾಮೇಜ್ ಕಂಟ್ರೋಲ್ ಮಾಡಲು ಮುಂದಾಗಿರುವ ಸಿಎಂ ಕುಮಾರಸ್ವಾಮಿ, ಜೆಡಿಎಸ್ ಹಾಗೂ ಕಾಂಗ್ರೆಸ್ ನ ಬಂಡಾಯ ಶಾಸಕರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಡಿಸಿಎಂ ಜಿ ಪರಮೇಶ್ವರ್ ಬಿಜೆಪಿ ಶಾಸಕರನ್ನು ಸೆಳೆಯಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಯಾವ ಬಿಜೆಪಿ ಶಾಸಕರು ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿದ್ದಾರೆ ಎಂಬುದು ತಿಳಿದಿಲ್ಲ, ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸವಾಲು ಎಸೆದಿದ್ದಾರೆ.
ಕಳೆದ ಮೂರು ತಿಂಗಳಿನಿಂದ ಅವರು ನಮ್ಮ ಶಾಸಕರನ್ನು ಸೆಳೆಯಲು ಪ್ರಯತ್ನ ನಡೆಸುತ್ತಲೇ ಬಂದಿದ್ದಾರೆ,  ಆದನ್ನು ನಾವು  ತಡೆಯುವುದಿಲ್ಲ, ಕೇವಲ ಒಬ್ಬನೇ ಒಬ್ಬ ಬಿಜೆಪಿ ಶಾಸಕನನ್ನು ಸೆಳೆಯಲಿ ಎಂದು ಸವಾಲು ಹಾಕಿದ್ದಾರೆ. ನಮ್ಮ ಎಲ್ಲಾ 105 ಶಾಸಕರು ಒಗ್ಗಟ್ಟಾಗಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ದಿನೇಶ್ ಗುಂಡೂರಾವ್ ಹೇಳಿಕೆ ನಂತರ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ,. ಮತ್ತಷ್ಟು ಶಾಸಕರು ರಾಜಿನಾಮೆ ನೀಡುತ್ತಾರೆ ಎಂಬ ಆತಂಕ ಸಮ್ಮಿಶ್ರ ಸರ್ಕಾರವನ್ನು ಕಾಡುತ್ತಿದೆ,.
ಪಕ್ಷದ ವಿಚಾರವಾಗಿ ಅಸಮಾಧಾನ ಎಲ್ಲರಿಗೂ ಇದೆ. ಹಾಗೆಂದ ಮಾತ್ರಕ್ಕೆ ಸರ್ಕಾರ ಬೀಳುತ್ತದೆ ಅನ್ನೋದು ತಪ್ಪು. ವೈಯಕ್ತಿಕ ಕಾರಣದಿಂದ ಕಾಂಗ್ರೆಸ್ ನ ಇಬ್ಬರು ಶಾಸಕರು ರಾಜೀನಾಮೆ ನೀಡಿದ್ದಾರೆ.  ಅದರ ಜೊತೆಗೆ ಅಲ್ಪಸಂಖ್ಯಾತರನ್ನು ಕಡೆಗಣಿಸಲಾಗುತ್ತಿದೆ ಎಂದು ತನ್ವೀರ್ ಸೇಠ್ ಆರೋಪಿಸಿದ್ದಾರೆ.
ಬಿಜೆಪಿಯಲ್ಲಿರುವ ಅಸಮಾಧಾನಿತ ಶಾಸಕರನ್ನು ಸೆಳೆಯಲು ಪ್ರಯತ್ನಿಸಿದ್ದಾರೆ ಡಿಸಿಎಂ ಪರಮೇಶ್ವರ್  ಪರೋಕ್ಷವಾಗಿ ಸಂದೇಶ ನೀಡಿದ್ದಾರೆ. ಅಮೆರಿಕಾದಲ್ಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ. 
ಪರಿಸ್ಥಿತಿಯನ್ನು ಎರಡು ಪಕ್ಷದವರು ಒಟ್ಟಾಗಿ ಸೇರಿ ನಿಬಾಯಿಸಬೇಕು ಎಂದು ನಿರ್ಧರಿಸಿದ್ದಾರೆ. ಪಕ್ಷದಲ್ಲಿ ನಮಗೆ ಸ್ವಾತಂತ್ರ್ಯ ಇಲ್ಲ ಎಂದು ಕೆಲವು ಬಿಜೆಪಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ, ಆದರೆ ಅವರ ಹೆಸರುಗಳನ್ನು ನಾನು ಬಹಿರಂಗ ಪಡಿಸುವುದಿಲ್ಲ, ಎಲ್ಲವು ಒಂದು ಹಂತಕ್ಕೆ ಬಂದ ಮೇಲೆ ಎಲ್ಲವನ್ನು ಬಹಿರಂಗ ಪಡಿಸುವುದಾಗಿ ಪರಮೇಶ್ವರ್ ಹೇಳಿದ್ದಾರೆ.
ಇದೇ ವೇಳೆ ಸ್ಪೀಕರ್ ಈಗಲೇ ರಾಜಿನಾಮೆ ಪತ್ರ ಅಂಗೀಕರಿಸುವುದಿಲ್ಲ ಎಂದು  ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com