ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ದೊಡ್ಡಗೌಡರು: ರಾಜ್ಯಾಧ್ಯಕ್ಷರಾಗಿ ಎಚ್.ಕೆ ಕುಮಾರಸ್ವಾಮಿ ನೇಮಕ?

ಪಕ್ಷದ ಸಚಿವರ ನಡೆಯಿಂದ ಬೇಸತ್ತು ಶಾಸಕ ಎಚ್‌.ವಿಶ್ವನಾಥ್‌ ರಾಜೀನಾಮೆ ನೀಡಿದ ರಾಜ್ಯಾಧ್ಯಕ್ಷ ಹುದ್ದೆಗೆ ಸಕಲೇಶಪುರದ ಶಾಸಕ ಹಾಗೂ ದಲಿತ ...

Published: 04th July 2019 12:00 PM  |   Last Updated: 04th July 2019 11:43 AM   |  A+A-


???,?? ???????????, ??? ????????

HK Kumaraswamy And Madhu banarappa

Posted By : SD SD
Source : Online Desk
ಬೆಂಗಳೂರು:  ಶಾಸಕ ಎಚ್‌.ವಿಶ್ವನಾಥ್‌ ರಾಜೀನಾಮೆ ನೀಡಿದ ರಾಜ್ಯಾಧ್ಯಕ್ಷ ಹುದ್ದೆಗೆ ದಲಿತ ಮುಖಂಡ ಎಚ್‌.ಕೆ. ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡುವುದು ಬಹುತೇಕ ಖಚಿತವಾಗಿದೆ.

ಜೆಡಿಎಸ್ ರಾಜ್ಯಾಧ್ಯಕ್ಷಪಾಗಿ ಎಚ್,ಕೆ ಕುಮಾರಸ್ವಾಮಿ ಮತ್ತು ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ನೇಮಕವನ್ನು ಇಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಗುರುವಾರ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ.

ಪಕ್ಷದ ಪರಿಶಿಷ್ಟವರ್ಗಕ್ಕೆ ಸೇರಿದ ನಾಯಕರಿಗೆ ಸೂಕ್ತ ಸ್ಥಾನ-ಮಾನ ನೀಡಿಲ್ಲ ಎಂಬ ಕೊರಗು ಇದ್ದು, ಅವರಿಗೆ ಮನ್ನಣೆ ನೀಡಲಾಗುವುದು ಎಂದು ಇತ್ತೀಚೆಗಷ್ಟೇ ದೇವೇಗೌಡರು ಹೇಳಿಕೆ ನೀಡಿದ್ದರು. ಅದರಂತೆ ಆರು ಬಾರಿ ಶಾಸಕರಾಗಿರುವ ಎಚ್‌.ಕೆ.ಕುಮಾರಸ್ವಾಮಿಗೆ ಅಧ್ಯಕ್ಷ ಸ್ಥಾನ ನೀಡಲು ಮುಂದಾಗಿದ್ದಾರೆ. 

ಜೊತೆಗೆ ತಮಗೆ ಸಚಿವ ಸ್ಥಾನ ಸಿಗಲಿಲ್ಲವೆಂದು ಮುನಿಸಿಕೊಂಡಿದ್ದ ಎಚ್.ಕೆ ಕುಮಾರಸ್ವಾಮಿ ಅವರಿಗೆ ರಾಜ್ಯಾಧ್ಯಕ್ಷ ಹುದ್ದೆ ನೀಡುವ ಮೂಲಕ ಗೌಡರು ನೈಪುಣ್ಯತೆ ಮರೆದಿದ್ದಾರೆ.

ಪಕ್ಷದ ಯುವ ಘಟಕ ಅಧ್ಯಕ್ಷ ಮಧುಬಂಗಾರಪ್ಪ ಅವರಿಗೆ ಕಾರ್ಯಾಧ್ಯಕ್ಷ ಹುದ್ದೆಯೂ ನೀಡುವ ಬಗ್ಗೆ ಆಲೋಚನೆ ನಡೆದಿದೆ ಇಂದು ಬಹತೇಕ ಫೈನಲ್ ಆಗಲಿದೆ.  ಲೋಕಸಭೆ ಚುನಾವಣೆಯಲ್ಲಿ ಸೋತ ಬಳಿಕ ಮಧು ಬಂಗಾರಪ್ಪ ಪಕ್ಷದ ಯಾವುದೇ ಚಟುವಟಿಕೆಯಲ್ಲಿ ಭಾಗಿಯಾಗುತ್ತಿಲ್ಲ, ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಸಿದರೇ ಸಕ್ರಿಯ ರಾಜಕಾರಣದಲ್ಲಿ ಕ್ರಿಯಾಶೀಲರಾಗುತ್ತಾರೆ ಎಂಬ ಕಾರಣದಿಂದಾಗಿ ಮಧು ಬಂಗಾರಪ್ಪ ಅವರನ್ನು ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲಾಗುತ್ತಿದ ಎಂಬ ಮಾತುಗಳು ಕೇಳಿ ಬರುತ್ತಿವೆ.
Stay up to date on all the latest ರಾಜಕೀಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp