ವಿಶ್ವನಾಥ್ ಸೇರಿ ಇಂದು 8 ಶಾಸಕರ ರಾಜಿನಾಮೆ? ಪತನವಾಗುತ್ತಾ ಸಮ್ಮಿಶ್ರ ಸರ್ಕಾರ?

ರಾಜ್ಯ ರಾಜಕಾರಣದಲ್ಲಿ ಬಹು ದೊಡ್ಡ ಆಪರೇಷನ್ ಕಮಲ ನಡೆಯುತ್ತಿದ್ದು, ಬರೋಬ್ಬರಿ 8 ಶಾಸಕರು ರಾಜೀನಾಮೆ ಕೊಡುವ ಸಾಧ್ಯತೆ ಇದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿದಂತೆ 8 ಹೆಚ್ಚು ಅತೃಪ್ತ ಶಾಸಕರು ಇಂದು ರಾಜೀನಾಮೆ ಕೊಡುವ ಸಾಧ್ಯತೆ ಇದೆ
ಸ್ಪೀಕರ್ ಕಚೇರಿಗೆ ಆಗಮಿಸಿದ 8 ಶಾಸಕರು
ಸ್ಪೀಕರ್ ಕಚೇರಿಗೆ ಆಗಮಿಸಿದ 8 ಶಾಸಕರು
ಬೆಂಗಳೂರು:  ರಾಜ್ಯ ರಾಜಕಾರಣದಲ್ಲಿ ಬಹು ದೊಡ್ಡ ಆಪರೇಷನ್ ಕಮಲ ನಡೆಯುತ್ತಿದ್ದು, ಬರೋಬ್ಬರಿ 8 ಶಾಸಕರು ರಾಜೀನಾಮೆ ಕೊಡುವ ಸಾಧ್ಯತೆ ಇದೆ. 
ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿದಂತೆ 8 ಹೆಚ್ಚು ಅತೃಪ್ತ ಶಾಸಕರು ಇಂದು ರಾಜೀನಾಮೆ ಕೊಡುವ ಸಾಧ್ಯತೆ ಇದೆ. ಅದರಲ್ಲೂ ಬಂಡಾಯಗಾರರ ಪಟ್ಟಿಯಲ್ಲಿ ಬೆಂಗಳೂರಿನ ಐವರು ಶಾಸಕರ ಹೆಸರೂ ಇದೆ ಎಂಬುದಾಗಿ ತಿಳಿದುಬಂದಿದೆ. ಹೀಗಾಗಿ ಶಾಸಕರು ಸ್ಪೀಕರ್ ಕಚೇರಿಗೆ ಆಗಮಿಸಿದ್ದಾರೆ. 
ರಮೇಶ್ ಜಾರಕಿಹೊಳಿ, ಬಿಸಿ ಪಾಟೀಲ್, ಜೆಡಿಎಸ್ ನ ಎಚ್.ವಿಶ್ವನಾಥ್ ಹಾಗೂ ಗೋಪಾಲಯ್ಯ ಹಾಗೂ ಶಿವರಾಮ್ ಹೆಬ್ಬಾರ್, ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ರಾಜೀನಾಮೆ, ಮಹೇಶ್ ಕುಮಟಳ್ಳಿ ವಿಧಾನಸೌಧದಲ್ಲಿ ಸ್ಪೀಕರ್ ಕಚೇರಿಗೆ ಆಗಮಿಸಿದ್ದಾರೆ. ಇವರೆಲ್ಲರೂ  ಇಂದು ರಾಜಿನಾಮೆ ನೀಡುತ್ತಾರೆ ಎಂದು ಹೇಳಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com