ನಾನು ರಾಜೀನಾಮೆ ನೀಡಿದ್ದೇನೆ, ಆದರೆ ಅತೃಪ್ತರ ಗುಂಪಿನಲ್ಲಿ ಇಲ್ಲ: ರಾಮಲಿಂಗಾರೆಡ್ಡಿ

ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ತಾವು ಯಾವ ಕಾರಣದಿಂದ ರಾಜೀನಾಮೆ ಸಲ್ಲಿಸಿದ್ದೇನೆ ಎನ್ನುವುದು ಎಲ್ಲರಿಗೂ ತಿಳಿದಿದೆ ಎಂದು....

Published: 06th July 2019 12:00 PM  |   Last Updated: 06th July 2019 08:41 AM   |  A+A-


I am not in rebel MLAs group, says Ramalinga Reddy

ರಾಮಲಿಂಗಾ ರೆಡ್ಡಿ

Posted By : LSB LSB
Source : UNI
ಬೆಂಗಳೂರು: ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ತಾವು ಯಾವ ಕಾರಣದಿಂದ ರಾಜೀನಾಮೆ ಸಲ್ಲಿಸಿದ್ದೇನೆ ಎನ್ನುವುದು ಎಲ್ಲರಿಗೂ ತಿಳಿದಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಸ್ವಪಕ್ಷೀಯರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ರಾಜೀನಾಮೆ ಹಿನ್ನೆಲೆಯಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಅವರು, ತಾವು ಅತೃಪ್ತ ಶಾಸಕರ ಗುಂಪಿನಲ್ಲಿ ಇಲ್ಲ. ಒಬ್ಬಂಟಿಯಾಗಿ ರಾಜೀನಾಮೆ ಸಲ್ಲಿಸಿದ್ದೇನೆ ಎಂದರು.

ಶಾಸಕ ಮುನಿರತ್ನಂ ಮಾತನಾಡಿ, ಶಾಸಕ ಸ್ಥಾನಕ್ಕೆ ತಾವು ರಾಜೀನಾಮೆ ನೀಡಿದ್ದು, ಅದನ್ನು ಹಿಂಪಡೆಯುವ ಮಾತೇ ಇಲ್ಲ. ರಾಜೀನಾಮೆ ವಿಚಾರವಾಗಿ ಏನೇ ಹೇಳಬೇಕಿದ್ದರೂ ಆ ಬಗ್ಗೆ ನಮ್ಮ ನಾಯಕರಾದ ರಾಮಲಿಂಗಾರೆಡ್ಡಿ ಹೇಳುತ್ತಾರೆ ಎಂದರು.

Stay up to date on all the latest ರಾಜಕೀಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp