ಕುಮಾರಸ್ವಾಮಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಚುನಾವಣೆಗೆ ಹೋಗಲಿ: ಬಸವರಾಜ ಹೊರಟ್ಟಿ

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಧಾನಸಭೆಯನ್ನು ವಿಸರ್ಜಿಸುವುದು ಸೂಕ್ತ ಮಾಜಿ ಸಚಿವ ಮತ್ತು ಜೆಡಿಎಸ್...

Published: 07th July 2019 12:00 PM  |   Last Updated: 07th July 2019 08:32 AM   |  A+A-


Speaker should accept resignations and Kumaraswamy should go for fresh election: Basavaraj Horatti

ಬಸವರಾಜ ಹೊರಟ್ಟಿ

Posted By : LSB LSB
Source : UNI
ಬೆಳಗಾವಿ: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಧಾನಸಭೆಯನ್ನು ವಿಸರ್ಜಿಸುವುದು ಸೂಕ್ತ ಮಾಜಿ ಸಚಿವ ಮತ್ತು ಜೆಡಿಎಸ್ ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವರು ಭಾನುವಾರ ಹೇಳಿದ್ದಾರೆ.

ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ ಕುಮಾರಸ್ವಾಮಿ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಚುನಾವಣೆಗೆ ಹೋಗುವುದು ಉತ್ತಮ ಎಂದರು.

14 ಶಾಸಕರು ರಾಜೀನಾಮೆ ನೀಡಿರುವುದು ರಾಜ್ಯದ ಹಿದದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ ಮತ್ತು ಎಲ್ಲಾ ಶಾಸಕರನ್ನು ಮಂತ್ರಿ ಮಾಡಲು ಆಗುವುದಿಲ್ಲ ಎಂದರು.

ಇದೇ ವೇಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲಾ 14 ಶಾಸಕರ ರಾಜೀನಾಮೆಯನ್ನು ಸ್ಪೀಕರ್ ರಮೇಶ್ ಕುಮಾರ್ ಅಂಗೀಕರಿಸಬೇಕು ಎಂದು ಬಸವರಾಜ ಹೊರಟ್ಟಿ ಅವರು ಒತ್ತಾಯಿಸಿದ್ದಾರೆ.

ನಿನ್ನೆ ಜೆಡಿಎಸ್ ಮತ್ತು ಕಾಂಗ್ರೆಸ್‌ನ 14 ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಲ್ಲಿ ಹಲವರು ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಂದಿನಿಂದ ವಸೂಲಿಯಲ್ಲಿ ತೊಡಗಿದ್ದಾರೆ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಬಗ್ಗೆ ಅವರಿಗೆ ವಿಶ್ವಾಸವಿಲ್ಲ. ರಾಜಕೀಯ ಆಟ ಆಡುತ್ತಿರುವ ಶಾಸಕರ ರಾಜೀನಾಮೆಯನ್ನು ಸ್ಪೀಕರ್ ತಕ್ಷಣ ಸ್ವೀಕರಿಸಬೇಕು ಎಂದರು.

ಇಂತಹ ಬೆಳವಣಿಗೆಯನ್ನು ನಾನೆಂದೂ ಕಂಡಿರಲಿಲ್ಲ. ರಾಜೀನಾಮೆಯನ್ನು ಸ್ಪೀಕರ್ ಅವರಿಗೆ ಸಲ್ಲಿಸಬೇಕು ಆದರೆ, ಇದೇ ಮೊದಲ ಬಾರಿಗೆ ರಾಜೀನಾಮೆಯನ್ನು ರಾಜ್ಯಪಾಲರಿಗೆ ಸಲ್ಲಿಸಲಾಗಿದೆ. ಈ ಮೂಲಕ ಹೊಸ ಸಂಪ್ರದಾಯ ಹುಟ್ಟುಹಾಕಲಾಗಿದೆ ಎಂದು ಹೊರಟ್ಟಿ ಹೇಳಿದರು.
Stay up to date on all the latest ರಾಜಕೀಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp