ನಾನು ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದೇನೆ: ಗೋವಾ ಮುಂಬಯಿ ಎಲ್ಲಿಗೂ ಹೋಗುತ್ತಿಲ್ಲ; ರೋಷನ್ ಬೇಗ್

ಶಿವಾಜಿನಗರ ಕ್ಷೇತ್ರದ ಶಾಸಕ ರೋಷನ್ ಬೇಗ್ ಇಂದು ಖುದ್ದಾಗಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರಾಜಿನಾಮೆ ಸಲ್ಲಿಸಿರುವುದಾಗಿ ಸ್ವತಃ ಅವರೇ ಸ್ಪಷ್ಟ ಪಡಿಸಿದ್ದಾರೆ. ..
ರೋಷನ್ ಬೇಗ್
ರೋಷನ್ ಬೇಗ್
ಬೆಂಗಳೂರು: ನಿರೀಕ್ಷೆಯಂತೆಯೇ ಕಾಂಗ್ರೆಸ್ ಶಾಸಕ ರೋಷನ್ ಬೇಗ್ ಇಂದು ರಾಜಿನಾಮೆ ಸಲ್ಲಿಸಿದ್ದಾರೆ.
ಶಿವಾಜಿನಗರ ಕ್ಷೇತ್ರದ ಶಾಸಕ ರೋಷನ್ ಬೇಗ್ ಇಂದು ಖುದ್ದಾಗಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರಾಜಿನಾಮೆ ಸಲ್ಲಿಸಿರುವುದಾಗಿ ಸ್ವತಃ ಅವರೇ ಸ್ಪಷ್ಟ ಪಡಿಸಿದ್ದಾರೆ. 
ನಾನು ಮುಂಬಯಿ ಅಥವಾ ಗೋವಾಗೆ ಹೋಗುತ್ತಿಲ್ಲ, ನಾನು ಹಜ್ ಕಮಿಟಿ ಮುಖಂಡನಾಗಿದ್ದೇನೆ, ಹೀಗಾಗಿ ನನ್ನ ಸಮುದಾಯಕ್ಕೆ ಮಾಡಬೇಕಿರುವ ಕೆಲಸಗಳು ಬೇಕಾದಷ್ಟಿವೆ,  ನಾನು ಹಜ್ ಯಾತ್ರಿಗಳನ್ನು ಕಳುಹಿಸಲು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದೇನೆ ಎಂದು ಹೇಳಿದ್ದಾರೆ,. ಇನ್ನೂ ಸ್ಪೀಕರ್ ಕಚೇರಿಯಲ್ಲಿ ಹಲವು ಕಾಂಗ್ರೆಸ್ ನಾಯಕರುಗಳಿದ್ದರು, ಅವರೆಲ್ಲಾ ಜಸ್ಟ್ ಹಾಯ್, ಹಲೋ ಹೇಳಿದರು ಎಂದು ಹೇಳಿದ್ದಾರೆ.
ಕಾಂಗ್ರೆಸ್ ನನ್ನನ್ನು ಈಗಾಗಲೇ ಅಮಾನುತು ಮಾಡಿದೆ. ಅಂದು ನಾನು ಆಡಿದ್ದ ಮಾತುಗಳೇ ದೊಡ್ಡ ಅಪರಾಧವಾಗಿತ್ತು. ಲೋಕಸಭಾ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ 14 ಸಾವಿರಕ್ಕೂ ಹೆಚ್ಚು ಮತಗಳ ಲೀಡ್ ಬಂದಿದೆ. ಬೇರೆ ಯಾವ ಕ್ಷೇತ್ರದ ಅಭ್ಯರ್ಥಿಯೂ ಈ ಕೆಲಸವನ್ನು ಮಾಡಲಿಲ್ಲ. ಕೋಲಾರದಲ್ಲಿ ದಲಿತ ನಾಯಕನನ್ನು ಸೋಲಿಸುತ್ತೇವೆ ಎಂದು ನಮ್ಮ ಪಕ್ಷದ ಶಾಸಕರೇ ಹೇಳಿದ್ದರು. ಇತ್ತ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಪರ ಕಾಂಗ್ರೆಸ್ ನಾಯಕರು ಪ್ರಚಾರ ನಡೆಸಿದರು. ಅಂತವರ ವಿರುದ್ಧ ಪಕ್ಷ ಯಾವುದೇ ಕ್ರಮಕ್ಕೆ ಮುಂದಾಗಲಿಲ್ಲ. ಬಡಪಾಯಿಯಾದ ನನ್ನ ಮೇಲೆ ಮಾತ್ರ ಕ್ರಮ ಕೈಗೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com