ಮೈತ್ರಿ ಬಿಕ್ಕಟ್ಟು: ಇಂದು ವಿಧಾನ ಸೌಧ ಮುಂದೆ ಬಿಜೆಪಿ ಧರಣಿ, ರಾಜ್ಯಪಾಲ ಕಚೇರಿ ಎದುರು ಕಾಂಗ್ರೆಸ್-ಜೆಡಿಎಸ್ ಪ್ರತಿಭಟನೆ

ರಾಜ್ಯ ಮೈತ್ರಿ ಸರ್ಕಾರದಲ್ಲಿ ಸಚಿವರುಗಳು ಮತ್ತು 14 ಶಾಸಕರು ರಾಜೀನಾಮೆ ನೀಡಿ ಸರ್ಕಾರ ಬಹುಮತ ಕಳೆದುಕೊಂಡಿರುವುದರಿಂದ ...
ನಿನ್ನೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಬಿ ಎಸ್ ಯಡಿಯೂರಪ್ಪ ಮತ್ತು ಇತರ ಬಿಜೆಪಿ ನಾಯಕರು
ನಿನ್ನೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಬಿ ಎಸ್ ಯಡಿಯೂರಪ್ಪ ಮತ್ತು ಇತರ ಬಿಜೆಪಿ ನಾಯಕರು
ಬೆಂಗಳೂರು: ರಾಜ್ಯ ಮೈತ್ರಿ ಸರ್ಕಾರದಲ್ಲಿ ಸಚಿವರುಗಳು ಮತ್ತು 14 ಶಾಸಕರು ರಾಜೀನಾಮೆ ನೀಡಿ ಸರ್ಕಾರ ಬಹುಮತ ಕಳೆದುಕೊಂಡಿರುವುದರಿಂದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕೆಂದು ಭಾರತೀಯ ಜನತಾ ಪಾರ್ಟಿ ಆಗ್ರಹಿಸಿದ್ದು ಈ ಸಂಬಂಧ ಬುಧವಾರ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಲಿದ್ದಾರೆ. 

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿದ 14 ಶಾಸಕರ ಪೈಕಿ 11 ಕಾಂಗ್ರೆಸ್ ಶಾಸಕರು ಮತ್ತು ಮೂವರು ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ್ದಾರೆ. 

ನಮ್ಮ ಶಾಸಕರ ಜೊತೆ ಚರ್ಚೆ ಮಾಡಿದ್ದು ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇನ್ನೊಂದೆಡೆ ರಾಜ್ಯಪಾಲ ವಜುಭಾಯಿ ವಾಲಾ ಭಾರತೀಯ ಜನತಾ ಪಾರ್ಟಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್-ಜೆಡಿಎಸ್ ನಾಯಕರು ಇಂದು ರಾಜ್ಯಪಾಲರ ಕಚೇರಿಗೆ ಮುತ್ತಿಗೆ ಹಾಕಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com