ಸಂಜೆ 6 ಗಂಟೆಯೊಳಗೆ ಇತ್ಯರ್ಥ ಅಸಾಧ್ಯ; ಸ್ಪೀಕರ್ ಅರ್ಜಿಯ ತುರ್ತು ವಿಚಾರಣೆಗೆ 'ಸುಪ್ರೀಂ' ನಕಾರ

ಅತೃಪ್ತ ಶಾಸಕರ ರಾಜಿನಾಮೆ ವಿಚಾರವನ್ನು ಸಂಜೆ 6 ಗಂಟೆಯೊಳಗೆ ನಿರ್ಧರಿಸಲು ಸಾಧ್ಯವಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಸುಪ್ರೀಂ ಕೋರ್ಟ್ ಗೆ ಹೇಳಿದ್ದಾರೆ.
ರಮೇಶ್ ಕುಮಾರ್
ರಮೇಶ್ ಕುಮಾರ್
ಬೆಂಗಳೂರು: ಅತೃಪ್ತ ಶಾಸಕರ ರಾಜಿನಾಮೆ ವಿಚಾರವನ್ನು ಸಂಜೆ 6 ಗಂಟೆಯೊಳಗೆ ನಿರ್ಧರಿಸಲು ಸಾಧ್ಯವಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ. 

ಅತೃಪ್ತ ಶಾಸಕರ ರಾಜಿನಾಮೆ ವಿಚಾರವನ್ನು ಸಂಜೆ 6 ಗಂಟೆಯೊಳಗೆ ನಿರ್ಧರಿಸಲು ಸಾಧ್ಯವಿಲ್ಲ. ಇನ್ನಷ್ಟು ಸಮಯಬೇಕು ಎಂದು ಸ್ಪೀಕರ್ ರಮೇಶ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನಿರಾಕರಿಸಿರುವ ಸುಪ್ರೀಂಕೋರ್ಟ್ ನಾಳೆಗೆ ಅರ್ಜಿಯ ವಿಚಾರಣೆ ನಡೆಸಲಿದೆ. 
ಸ್ಪೀಕರ್ ಆಗಿರುವ ನನಗೆ ನೀವು ನನಗೆ ಆದೇಶಿಸಲು ಬರುವುದಿಲ್ಲ, ಅಸೆಂಬ್ಲಿ ನಿಯಾಮಾವಳಿಗಳ ಪ್ರಕಾರ ನಾನು ಕ್ರಮ ತೆಗೆದುಕೊಳ್ಳುತ್ತೇನೆ,  ಸ್ಪೀಕರ್ ಆಗಿ ಸಾಂವಿಧಾನಿಕ ನಿಯಮಗಳನ್ನು ಪಾಲಿಸಬೇಕಿದೆ, ವಿಚಾರಣೆಯನ್ನು ಮಧ್ಯರಾತ್ರಿ 12 ಗಂಟೆಗೊಳಗೆ ಮುಗಿಸಲು ಸಾಧ್ಯವಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಸುಪ್ರೀಂಕೋರ್ಟ್ ಗೆ ತಿಳಿಸಿದ್ದಾರೆ.
ರಾಜಿನಾಮೆ ಸ್ವಯಂ ಪ್ರೇರಿತವೋ ಅಥವಾ ಬಲವಂತವೋ ಎಂಬ ಬಗ್ಗೆ ತನಿಖೆ ನಡೆಸಬೇಕು, ಹೀಗಾಗಿ ಅರ್ಜಿಯ ವಿತಾರಣೆ ಸಂಬಂಧ ಏಕಾಏಕಿ ನಿರ್ಧಾರ ಕೈಗೊಳ್ಳಲಾಗುವುದಿಲ್ಲ ಎಂದು ವಿವರಿಸಿದ್ದಾರೆ.  
ಅತೃಪ್ತ ಶಾಸಕರು ಸ್ಪೀಕರ್ ಅವರನ್ನು ಇಂದು ಸಂಜೆ 6 ಗಂಟೆಯೊಳಗೆ ಖುದ್ದಾಗಿ ಭೇಟಿ ಮಾಡಿ ರಾಜೀನಾಮೆ ಸಲ್ಲಿಸಬೇಕು ಎಂದು ಕೋರ್ಟ್ ಸೂಚಿಸಿತ್ತು. ಅಲ್ಲದೆ ಸ್ಪೀಕರ್ ರಮೇಶ್ ಕುಮಾರ್ ಅವರು ಅತೃಪ್ತ ಶಾಸಕರ ರಾಜೀನಾಮೆ ಕುರಿತು ಇಂದೇ ನಿರ್ಧಾರ ಕೈಗೊಳ್ಳಬೇಕು. ಆ ನಿರ್ಧಾರವನ್ನು ನಾಳೆ ತನಗೆ ತಿಳಿಸಬೇಕೆಂದೂ ಸುಪ್ರೀಂ ಕೋರ್ಟ್ ಸೂಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com