ನಾನ್ಯಾಕೆ ರಾಜಿನಾಮೆ ಕೊಡಬೇಕು: ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಶ್ನೆ?

ನಾನ್ಯಾಕೆ ರಾಜಿನಾಮೆ ಕೊಡಲಿ, ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಹೇಳಿದ್ದಾರೆ.
ಕುಮಾರಸ್ವಾಮಿ
ಕುಮಾರಸ್ವಾಮಿ
ಬೆಂಗಳೂರು: ನಾನ್ಯಾಕೆ ರಾಜಿನಾಮೆ ಕೊಡಲಿ, ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಹೇಳಿದ್ದಾರೆ.
ಕುಮಾರಕೃಪ ಅತಿಥಿಗೃಹದಲ್ಲಿ ಸಭೆ ನಡೆಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ನಾನ್ಯಾಕೆ ರಾಜೀನಾಮೆ ಕೊಡಲಿ. ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
2009-10ರಲ್ಲಿ ಯಡಿಯೂರಪ್ಪ ಅವರ ಅವಧಿಯಲ್ಲಿ 18 ಶಾಸಕರು ರಾಜೀನಾಮೆ ನೀಡಿದ್ದರು. ಹಾಗಂತ ಯಡಿಯೂರಪ್ಪ ಅವರು ರಾಜೀನಾಮೆ ಕೊಟ್ರಾ? ನಾನು ರಾಜೀನಾಮೆ ನೀಡುವ ಸನ್ನಿವೇಶ ಉದ್ಭವವಾಗಿಲ್ಲ. ಕಾನೂನು ತಜ್ಞರಿಂದ ನಾನು ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಕುಮಾರಕೃಪಾ ಅತಿಥಿ ಗೃಹದಲ್ಲಿ ಕಾಂಗ್ರೆಸ್ ಮುಖಂಡರಾದ ಗುಲಾಂ ನಬಿ ಆಜಾದ್, ವೇಣುಗೋಪಾಲ್, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ಸಿಎಂ ಸೇರಿದಂತೆ ಎರಡೂ ಪಕ್ಷಗಳ ಮುಖಂಡರು ಜಂಟಿಯಾಗಿ ಸಭೆ ನಡೆಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com