ರಾಜೀನಾಮೆ ವಾಪಸ್ ಪಡೆಯುವ ಬಗ್ಗೆ ಇಂದು ಸಂಜೆ ನಿರ್ಧಾರ: ರಾಮಲಿಂಗಾ ರೆಡ್ಡಿ

ಸಮ್ಮಿಶ್ರ ಸರ್ಕಾರದ ವಿರುದ್ಧ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರು
ರಾಮಲಿಂಗಾ ರೆಡ್ಡಿ
ರಾಮಲಿಂಗಾ ರೆಡ್ಡಿ
ಬೆಂಗಳೂರು: ಸಮ್ಮಿಶ್ರ ಸರ್ಕಾರದ ವಿರುದ್ಧ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರು, ರಾಜೀನಾಮೆ ಹಿಂಪಡೆಯುವ ಬಗ್ಗೆ ಇಂದು ಸಂಜೆ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಮಲಿಂಗಾ ರೆಡ್ಡಿ ಅವರನ್ನು ನಿನ್ನೆ ಸಂಧಾನ ಬಹುತೇಕ ಯಶಸ್ವಿಯಾಗಿದ್ದು, ರಾಜೀನಾಮೆ ಹಿಂಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, ಪಕ್ಷದ ಹಿರಿಯ ನಾಯಕರೊಂದಿಗೆ ನಾಲ್ಕು ಗೋಡೆಗಳ ಮಧ್ಯೆ ನಡೆದ ಚರ್ಚೆಯನ್ನು ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಹಿಂಪಡೆಯುವಂತೆ ಅವರು ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ರಾಜೀನಾಮೆ ಹಿಂಪಡೆಯುವ ಬಗ್ಗೆ ನಾನು ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದಿದ್ದಾರೆ.
ಈ ಮಧ್ಯೆ ಇಂದು ಸಂಜೆ 4 ಗಂಟೆಗೆ ಸ್ಪೀಕರ್ ರಮೇಶ್ ಕುಮಾರ್ ಅವರ ಮುಂದೆ ವಿಚಾರಣೆಗೆ ಹಾಜರಾಗಬೇಕಿದ್ದ ರಾಮಲಿಂಗಾ ರೆಡ್ಡಿ ಅವರು, ಸ್ಪೀಕರ್ ಕಚೇರಿಗೆ ಕರೆ ಮಾಡಿ, ಕಾರಣಾಂತರಗಳಿಂದ ವಿಚಾರಣೆ ಬರಲು ಆಗುತ್ತಿಲ್ಲ. ಬೇರೆ ದಿನಾಂಕ ನೀಡುವಂತೆ ಮನವಿ ಮಾಡಿದ್ದಾರೆ.
ಕಾಂಗ್ರೆಸ್ ನಾಯಕರು ರಾಮಲಿಂಗಾ ರೆಡ್ಡಿ ಅವರ ಮೂಲಕ ಮುಂಬೈನಲ್ಲಿರುವ ಕೆಲ ಅತೃಪ್ತರ ಮನವೊಲಿಸುವ ಪ್ರಯತ್ನ ನಡೆಸಿದ್ದು. ರಾಜೀನಾಮೆ ನೀಡಿದ ಬೆಂಗಳೂರು ನಗರದ ಶಾಸಕಾರದ ಭೈರತಿ ಬಸವರಾಜು, ಎಸ್.ಟಿ. ಸೋಮಶೇಖರ್, ಮುನಿರತ್ನ ಮತ್ತು ಗೋಪಾಲಯ್ಯ ಅವರು ರಾಮಲಿಂಗಾ ರೆಡ್ಡಿ ಮಾತಿಗೆ ಬೆಲೆ ಕೊಡಬಹುದು. ಒಂದು ವೇಳೆ, ಇದು ಹೌದಾದಲ್ಲಿ ಡಾ| ಕೆ. ಸುಧಾಕರ್ ಮತ್ತು ಎಂಟಿಬಿ ನಾಗರಾಜ್ ಕೂಡ ಮನಸು ಬದಲಾಯಿಸಬಹುದು ಎಂಬುದು ಕಾಂಗ್ರೆಸ್ ನಾಯಕರ ಲೆಕ್ಕಾಚಾರ ಮತ್ತು ಆಶಯ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com