ವಿಧಾನಸಭೆ ಕಲಾಪ ಮತ್ತೆ ಆರಂಭ: ನಮ್ಮ ಶಾಸಕರನ್ನು ಅಪಹರಿಸಲಾಗಿದೆ - ಡಿಕೆಶಿ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ನಿರ್ಣಯ ಮಂಡಿಸಿದ್ದು, ಇದರ ಮೇಲೆ ನಡೆದ ಚರ್ಚೆ ಹಲವು ದಿಕ್ಕಿನೆಡೆಗೆ ತಿರುಗಿ...
ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್
ಬೆಂಗಳೂರು: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ನಿರ್ಣಯ ಮಂಡಿಸಿದ್ದು, ಇದರ ಮೇಲೆ ನಡೆದ ಚರ್ಚೆ ಹಲವು ದಿಕ್ಕಿನೆಡೆಗೆ ತಿರುಗಿ, ಆರೋಪ-ಪ್ರತ್ಯಾರೋಪಗಳಿಗೆ ಸಾಕ್ಷಿಯಾಗುತ್ತಿದೆ.
ಇಂದು ಮಧ್ಯಾಹ್ನ 3 ಗಂಟೆಗೆ ಕಲಾಪ ಪುನಾರಂಭವಾಗಿದ್ದು, ಈ ವೇಳೆ ಮಾತನಾಡಿದ ಸಚಿವ ಡಿಕೆ ಶಿವಕುಮಾರ್ ಅವರು, ಬಿಜೆಪಿ ನಾಯಕರು ನಮ್ಮ ಶಾಸಕರನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ಮುಖಂಡರೊಬ್ಬರು ಬಲವಂತವಾಗಿ ನಮ್ಮ ಪಕ್ಷದ ಶಾಸಕ ಶ್ರೀಮಂತ್ ಪಾಟೀಲ್ ಅವರನ್ನು ಮುಂಬೈಗೆ ಅಪಹರಣ ಮಾಡಿಕೊಂಡು ಹೋಗಿದ್ದಾರೆ. ಅವರು ಆರೋಗ್ಯವಾಗಿದ್ದೇನೆ ಎಂದರೂ ಬಲವಂತವಾಗಿ ಮುಂಬೈನ ಆಸ್ಪತ್ರೆಗೆ ದಾಖಲಿಸಿದ್ದಾರೆ  ಎಂದು ಡಿಕೆಶಿ ದೂರಿದರು. ಅಲ್ಲದೆ ಶ್ರೀಮಂತ್ ಪಾಟೀಲ್ ಅವರ ಫೋಟೋವನ್ನು ಪ್ರದರ್ಶಿಸಿದರು.
ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಅವರನ್ನು ರೆಸಾರ್ಟ್ ನಿಂದ ಅಪಹರಿಸಲಾಗಿದೆ. ಅನಾರೋಗ್ಯ ಪೀಡಿತರಾಗಿರುವ ಶ್ರೀಮಂತ ಪಾಟೀಲ್‌ ಅದು ಹೇಗೆ ಬೆಂಗಳೂರಿನಿಂದ ಚೆನ್ನೈಗೆ ಹಾಗೂ ಅಲ್ಲಿಂದ ಮುಂಬೈಗೆ ತೆರಳಿ ಆಸ್ಪತ್ರೆ ಸೇರಿದರು. ಇದರಲ್ಲಿ ಬಿಜೆಪಿಯವರ ಕೈವಾಡ ಇದೆ ಎಂದು ದಿನೇಶ್‌ ಗುಂಡೂರಾವ್‌ ಆರೋಪಿಸಿದರು. 
ಈ ಸಂದರ್ಭದಲ್ಲಿ ಬಿಜೆಪಿ-ಕಾಂಗ್ರೆಸ್‌-ಜೆಡಿಎಸ್‌ ನಡುವೆ ಮಾತಿನ ಚಕಮಕಿ ನಡೆಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com