ಸಿದ್ದರಾಮಯ್ಯ
ಸಿದ್ದರಾಮಯ್ಯ

ವಿಶ್ವಾಸಮತ ಯಾಚನೆ ಚರ್ಚೆ ಸೋಮವಾರದವರೆಗೂ ಮುಂದುವರೆಯಬಹುದು- ಸಿದ್ದರಾಮಯ್ಯ

ವಿಶ್ವಾಸಮತ ನಿರ್ಣಯ ಮೇಲಿನ ಚರ್ಚೆ ಈಗಲೇ ಮುಗಿಯುವಂತೆ ಕಾಣುತ್ತಿಲ್ಲ. 20 ಶಾಸಕರು ಗೈರಾಗಿದ್ದಾರೆ. ಸೋಮವಾರದವರೆಗೂ ಮುಂದುವರೆಯಬಹುದು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಂಡಿಸಿರುವ ವಿಶ್ವಾಸಮತ ನಿರ್ಣಯ ಮೇಲಿನ ಚರ್ಚೆ ಈಗಲೇ ಮುಗಿಯುವಂತೆ ಕಾಣುತ್ತಿಲ್ಲ. 20 ಶಾಸಕರು ಗೈರಾಗಿದ್ದಾರೆ. ಸೋಮವಾರದವರೆಗೂ ಮುಂದುವರೆಯಬಹುದು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಅಧಿವೇಶನವನ್ನು ಇಂತಿಷ್ಟೇ ಸಮಯಕ್ಕೆ ಮುಗಿಸಬೇಕು ಎಂದು ಆದೇಶ ನೀಡಲು ರಾಜ್ಯಪಾಲರಿಗೆ ಅಧಿಕಾರ ಇಲ್ಲ ಎಂದು ಸಹ ಅವರು ತಿಳಿಸಿದ್ದಾರೆ.
ವಿಧಾನಸಭೆ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಮಧ್ಯಾಹ್ನ 1-30ರ ಒಳಗಾಗಿ ವಿಶ್ವಾಸಮತ ಯಾಚನೆ ಕಲಾಪ ಮುಗಿಸುವಂತೆ ಮುಖ್ಯಮಂತ್ರಿಗೆ ಸೂಚನೆ ನೀಡಿದ್ದಾರೆ. ಆದರೆ, ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸದನದಲ್ಲಿ ಸ್ಪೀಕರ್ ಅವರೇ ಸುಪ್ರೀಂ ಎಂದರು.
 ವಿಶ್ವಾಸಮತ ಯಾಚನೆ ಗೊತ್ತುವಳಿ ಈಗ ಸದನದ ಸೊತ್ತಾಗಿದೆ. ಹೀಗಾಗಿ ಎಷ್ಟು ಸಮಯ ಬೇಕಾದರೂ ಚರ್ಚೆ ನಡೆಯಬಹುದು. ಬಹುತೇಕ ಕಲಾಪ ಇಂದು ಮುಕ್ತಾಯವಾಗುವ ಸಾಧ್ಯತೆಗಳು ಕಡಿಮೆ ಎಂದು ಅವರು ತಿಳಿಸಿದರು.

Related Stories

No stories found.

Advertisement

X
Kannada Prabha
www.kannadaprabha.com